ಮಂಗಳೂರು: ಕೊಣಾಜೆಯ ಅಸೈಗೋಳಿಯಲ್ಲಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಹೆಡ್‌ಕಾನ್‌ಸ್ಟೆಬಲ್ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಮೂಲತಃ ಉತ್ತರ ಕರ್ನಾಟಕದ ಸಂಜೀವ (38) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.
ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ ಸೋಮವಾರ ತಾವು ವಾಸವಾಗಿದ್ದ ಕ್ವಾರ್ಟರ್ಸ್‌ನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
























