ವಿಟ್ಲ: ಶ್ರೀ, ಕ್ಷೇತ್ರ,ಧರ್ಮಸ್ಥಳ,ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿಟ್ಲ ಅಳಿಕೆ ವಲಯದ. ಜನಜಾಗೃತಿ ಕಾರ್ಯಕ್ರಮದಡಿ ಸ್ಥಾಸ್ಯ ಸಂಕಲ್ಪ ಕಾರ್ಯಕ್ರಮ ಅಳಿಕೆ ಶ್ರೀಸತ್ಯ ಸಾಯಿ ಲೋಕಸೇವಾ ಪ್ರೌಢ ಶಾಲೆಯಲ್ಲಿ ನಡೆಯಿತು.
ಶಾಲಾ ಅಧ್ಯಾಪಕ ನಾರಾಯಣ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ಸಣ್ಣಗುತು, ಒಕ್ಕೂಟ ಪದಾಧಿಕಾರಿ ವಿಜಯಲಕ್ಷಿ .ಉಪಸ್ಥಿತರಿದ್ದರು ಸಂಪನ್ಮೂಲ ವ್ಯಕ್ತಿ ಹಾಗೂ. ಜನಜಾಗೃತಿ ವಲಯಾಧ್ಯಕ್ಷ ಬಾಲಕೃಷ್ಣ ಕಾರಂತ್ ಏರುಂಬು ಮಕ್ಕಳಿಗೆ
ಮುಂದಿನ ಜೀವನದಲ್ಲಿ ಶಿಸ್ತನ್ನು ಆಳವಡಿಸಿಕೊಳ್ಳಬೇಕು ಹಾಗೂ ದುಶ್ಚಟಗಳ ಅರಿವು ಮೂಡಿಸುವ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ಮೀನಾಕ್ಷಿ ಕಾರ್ಯಕ್ರಮ ನಿರ್ವಹಿಸಿ, ಸೇವಾಪ್ರತಿನಿಧಿ ಚಂದ್ರಾವತಿ ಸ್ವಾಗತಿಸಿ, ವಂದಿಸಿದರು.
























