ಬೆಂಗಳೂರು: ಕೆಲ ಸಮಯದ ಹಿಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಚವರ ಕುಟುಂಬ ವರ್ಗಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು RCB ಘೋಷಣೆ ಮಾಡಿದೆ.
ಈ ಘೋಷಣೆಯನ್ನು ಫ್ರಾಂಚೈಸಿಯ ಅಧಿಕೃತ ಖಾತೆಗಳಾದ ಎಕ್ಸ್ ಮತ್ತು ಇನ್ಸ್ಟಾಗ್ರಾಂ ಮೂಲಕ ಹೊಸದಾಗಿ ಆರಂಭ ಮಾಡಲಾದ RCB ಕೋರ್ಸ್ ಅಡಿಯಲ್ಲಿ ಮಾಡಲಾಗಿದೆ.
ಐಪಿಎಲ್‌ನಲ್ಲಿ ಚಾಂಪಿಯನ್ಸ್ ಆದ ಸಂಭ್ರಮವನ್ನು ಆಚರಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆಯಲಾಗಿತ್ತು. ಈ ಆಚರಣೆಗೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದು, ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿತ್ತು. ಆ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. 50 ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
























