ಮೈಸೂರು: ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್ ಈ ಹಿಂದೆ ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಲಿ. ಇಲ್ಲವಾದರೆ ಅವರಿಂದ ದಸರಾ ಉದ್ಘಾಟನೆಯಾಗುವುದಕ್ಕೆ ನನ್ನ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.
ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದಾಗ ನಾನು ಸ್ವಾಗತಿಸಿದ್ದೆ. ಆದರೆ ನಾನು ಅವರ ಹಳೆಯ ಭಾಷಣವನ್ನು ಆ ಬಳಿಕ ಕೇಳಿದ್ದು, ಅದಕ್ಕೆ ಸ್ಪಷ್ಚೀಕರಣ ನೀಡಲಿ. ಇಲ್ಲವಾದರೆ ಅವರು ನಾಡಹಬ್ಬವನ್ನು ಉದ್ಘಾಟನೆ ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದು ತಿಳಿಸಿದ್ದಾರೆ.
ನಮ್ಮ ಪಕ್ಷದ ನಿರ್ಧಾರವೇ ನಮ್ಮ ನಿರ್ಧಾರ. ಪಕ್ಷಕ್ಕೆ ವಿರುದ್ಧ ನಿಲುವು ನನ್ನದಲ್ಲ. ಕನ್ನಡಾಂಬೆಯ ಕುರಿತ ಬಾನು ಮುಷ್ತಾಕ್ ಹೇಳಿಕೆ ನೋವನ್ನು ನೀಡಿದೆ. ಅದರಿಂದ ಭಾವನೆಗಳಿಗೆ ಧಕ್ಕೆಯಾಗಿದೆ ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಅವರು ತಮ್ಮ ಹಿಂದಿನ ಹೇಳಿಕೆಗಳಿಗೆ ಸ್ಪಷ್ಚನೆ ನೀಡಲಿ ಎಂದು ಆಗ್ರಹಿಸಿದ್ದಾರೆ.
























