ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಯನ್ನು ನಿರ್ಧರಿಸುವ ಅಧಿಕಾರ ನನಗಿಲ್ಲ ಎಂದ ಅಣ್ಣಾಮಲೈ

ಚೆನ್ನೈ: ಮುಂಬರುವ ಲೋಕಸಭಾ ಚುನಾವಣೆ ವೇಳೆ ತಮಿಳುನಾಡಿನಲ್ಲಿ ಎಐಎಡಿಎಂಕೆ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡರೆ ನಾನು ಬಿಜೆಪಿಯಿಂದ ಹೊರಹೋಗುವುದಾಗಿ ತಮಿಳುನಾಡು ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ ಎಂಬ ಮಾತು ಬಾರಿ ಚರ್ಚೆಗೆ ಗ್ರಾಸವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಅಣ್ಣಾಮಲೈ, ಮೈತ್ರಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ, ಇದರ ಬಗ್ಗೆ ಪಕ್ಷದ ನಾಯಕತ್ವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ನಾನು ರಾಜಕೀಯಕ್ಕೆ ಬಂದಿರುವುದು ರಾಜ್ಯದಲ್ಲಿ ಬದಲಾವಣೆ ತರುವ ಉದ್ದೇಶಕ್ಕಾಗಿಯೇ ಹೊರತೂ, ಎಐಎಡಿಎಂಕೆಯ ಕಿರಿಯ ಮಿತ್ರನಾಗಿ ಇರಲು ಅಲ್ಲ. ಹೀಗಾಗಿ ಆ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಾದರೆ ಪಕ್ಷದಿಂದ ಹೊರಹೋಗುವುದಾಗಿ ಹೇಳಿದ್ದಾರೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು. ಈ ವಿಷಯದಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ನಡುವೆ ವಾಕ್ಸಮರ ನಡೆದಿತ್ತು. ಈ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅಣ್ಣಾಮಲೈ ಈ ವಿಷಯ ತಿಳಿಸಿದ್ದಾರೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top