ಸಾವಿರಾರು ಮಂದಿಗೆ ಗಾಯ, ನೂರಾರು ಮನೆ, ಕಟ್ಟಡಗಳು ಕುಸಿತ
ಕಾಬೂಲ್: ಪೂರ್ವ ಅಫ್ಘಾನಿಸ್ತಾನದಲ್ಲಿ ಭಾನುವಾರ ರಾತ್ರಿ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪದಲ್ಲಿ 800ಕ್ಕೂ ಮಂದಿ ಮಂದಿ ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಸಾವುನೋವಿಗೆ ವಿಷಾದ ವ್ಯಕ್ತಪಡಿಸಿರುವ ಭಾರತ ತುರ್ತು ನೆರವಿಗೆ ಧಾವಿಸಿದೆ.
ಭೂಕಂಪವು ಅಫ್ಘಾನಿಸ್ತಾನ ಮತ್ತು ನೆರೆಯ ಪಾಕಿಸ್ತಾನವನ್ನು ಕಂಗೆಡಿಸಿದೆ. ಮನೆಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದದಿಂದ ಸುಮಾರು 2,500 ಮಂದಿ ಗಾಯಗೊಂಡಿದ್ದಾರೆ. ನೂರಾರು ಮನೆ, ಕಟ್ಟಡಗಳು ಕುಸಿದಿವೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಫ್ಘಾನ್ ವಿದೇಶಾಂಗ ಸಚಿವ ಮೌಲವಿ ಅಮೀರ್ ಖಾನ್ ಮುತ್ತಕಿ ಅವರೊಂದಿಗೆ ಮಾತನಾಡಿ, ದುರಂತದಲ್ಲಿ ನಾಗರಿಕರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಫ್ಘಾನಿಸ್ತಾನದ ಸಂಕಷ್ಟದ ಸಮಯದಲ್ಲಿ ಅವರಿಗೆ ಸಹಾಯ ಮಾಡಲು ಭಾರತ ಡೇರೆಗಳು ಮತ್ತು ಆಹಾರ ಸಾಮಗ್ರಿಗಳನ್ನು ರವಾನಿಸಿದ್ದು, ಮುಂದಿನ ದಿನಗಳಲ್ಲಿ ಅಫ್ಘಾನಿಸ್ತಾನಕ್ಕೆ ಹೆಚ್ಚಿನ ನೆರವು ನೀಡಲಾಗುವುದು ಎಂದಿದ್ದಾರೆ.
ಭಾರತ ಇಂದು ಕಾಬೂಲ್‌ನಲ್ಲಿ 1000 ಕುಟುಂಬ ಡೇರೆಗಳನ್ನು ತಲುಪಿಸಿದೆ. ಭಾರತೀಯ ಮಿಷನ್ 15 ಟನ್ ಆಹಾರ ಸಾಮಗ್ರಿಗಳನ್ನು ತಕ್ಷಣವೇ ಕಾಬೂಲ್‌ನಿಂದ ಕುನಾರ್‌ಗೆ ಸಾಗಿಸುತ್ತಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.
ಭಾನುವಾರ ಮಧ್ಯರಾತ್ರಿಯ ಹೊತ್ತಿಗೆ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದ ಗಡಿಯಲ್ಲಿರುವ ಕುನಾರ್ ಪ್ರಾಂತ್ಯದಲ್ಲಿ ಅತ್ಯಂತ ಹೆಚ್ಚು ಹಾನಿ ಸಂಭವಿಸಿದೆ. ಕುನಾರ್ ಪ್ರಾಂತ್ಯವೊಂದರಲ್ಲೇ ಸುಮಾರು 800 ಜನರು ಸಾವನ್ನಪ್ಪಿದ್ದಾರೆ. ಅಫ್ಘಾನಿಸ್ತಾನದ ಭೂಕಂಪದ ಕೇಂದ್ರಬಿಂದು ಜಲಾಲಾಬಾದ್‌ನಿಂದ ಸುಮಾರು 27 ಕಿಲೋಮೀಟರ್ ದೂರದಲ್ಲಿತ್ತು. ಭೂಕಂಪವು ಭೂಮಿಯ ಮೇಲ್ಮೈಯಿಂದ ಎಂಟು ಕಿಲೋಮೀಟರ್ ಕೆಳಗೆ ಆಳದಲ್ಲಿ ಸಂಭವಿಸಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ.
























