ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಸಿಂಗಲ್‌ ಮದರ್‌ ಆಗಿರುವುದರಿಂದ ಜಾಮೀನು ಕೊಡಬೇಕೆಂದು ಕೋರಿದ್ದ ಪವಿತ್ರಾ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಅವರೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಹಾಕಿದ್ದಳು.

ತನ್ನಿಂದ ರೇಣುಕಾ ಸ್ವಾಮಿ ಸತ್ತಿಲ್ಲ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಇನ್ನಿತರ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದಳು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸದೆ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್​ ನ್ಯಾಯಾಲಯದ ನ್ಯಾಯಾಧೀಶ ಐ.ಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ.





















































 
 
error: Content is protected !!
Scroll to Top