ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜೊತೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಇಂದು ಮೈಸೂರು ಅರಮನೆಗೆ ಭೇಟಿ ನೀಡಿದ್ದಾರೆ.
ಈ ಬಗ್ಗೆ ರಾಜವಂಶದ ಪ್ರಮೋದಾ ದೇವಿ ಒಡೆಯರ್ ಅವರು ಸಂತಸ ಹಂಚಿಕೊಂಡಿದ್ದು, ರಾಷ್ಟ್ರಪತಿ ಮತ್ತು ಇತರ ಗಣ್ಯರನ್ನು ಅರಮನೆಗೆ ಸ್ವಾಗತಿಸಲು ನನಗೆ ಸಂತೋಷವಾಗಿದೆ, ಹೆಮ್ಮೆಯಾಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ, ಗೌರವಿಸಿದ್ದಕ್ಕಾಗಿ ನಾನು ಧನ್ಯವಾದ ಸಮರ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

