ಈಗ ಕಾಂಗ್ರೆಸ್‌ನಿಂದಲೂ ಅಪಪ್ರಚಾರ ಖಂಡಿಸಿ ಧರ್ಮಸ್ಥಳ ಚಲೋ

ಕಾಂಗ್ರೆಸ್‌ ಶಾಸಕರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದಾರೆ ನೂರಾರು ಮಂದಿ

ಬೆಂಗಳೂರು: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು ಹಲವು ಯಾತ್ರೆ, ಹೋರಾಟಗಳನ್ನು ನಡೆಸಿದ್ದಾಯಿತು. ಈಗ ಕಾಂಗ್ರೆಸ್‌ ಸರದಿ. ಕಾಂಗ್ರೆಸ್‌ ಶಾಸಕರೊಬ್ಬರು ಧರ್ಮಸ್ಥಳ ಚಲೋ ಯಾತ್ರೆ ಕೈಗೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಹರೀಶ್‌ ಗೌಡ ನೇತೃತ್ವದಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗಿಂದ ಯಾತ್ರೆ ಆರಂಭಿಸಲಾಗಿದೆ. ಬುಧವಾರ ಬೆಳಗ್ಗೆ ಆಂಜನೇಯ ದೇವರಿಗೆ ಪೂಜೆ ಸಲ್ಲಿಸಿ ಧರ್ಮಸ್ಥಳ ಯಾತ್ರೆಗೆ ಚಾಲನೆ ನೀಡಲಾಗಿದೆ. ಶಾಸಕ ಹರೀಶ್‌ಗೌಡ ಪ್ರತಿ ವಾರ್ಡ್‌ನಿಂದ ಬಸ್ ವ್ಯವಸ್ಥೆ ಮಾಡಿದ್ದಾರೆ.





















































 
 

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡುತ್ತಿರುವುದನ್ನು ಕಾಂಗ್ರೆಸ್‌ ಕೂಡ ಖಂಡಿಸುತ್ತದೆ. ಕಾಂಗ್ರೆಸ್‌ನವರು ಕೂಡ ಹಿಂದೂ ಧರ್ಮದ ಬಗ್ಗೆ ಅಪಾರ ಒಲವು ಇರುವವರು. ಆದರೆ, ಕಾಂಗ್ರೆಸ್‌ ವಿರುದ್ಧ ಬಿಜೆಪಿ ಇಲ್ಲಸಲ್ಲದ ಆರೋಪ ಮಾಡಿ ರಾಜಕೀಯ ಮಾಡುತ್ತಿದೆ ಎಂದು ಯಾತ್ರೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್‌ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

error: Content is protected !!
Scroll to Top