ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಮತ್ತೊಂದು ಮಹತ್ವದ ಟ್ವಿಸ್ಟ್ ದೊರೆತಿದೆ.
ಕೇರಳ ರಾಜ್ಯದ ಕಮ್ಯುನಿಸ್ಟ್ ಪಕ್ಷದ ಸಂಸದನನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿತ್ತು. ಸಂಸದ ಸಂತೋಷ್ ಕುಮಾರ್ ಅವರನ್ನು ಆರೋಪಿ ಚೆನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಭೇಟಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಪ್ರಕರಣದ ತನಿಖೆ 25% ಗಳಷ್ಟು ಮಾತ್ರವೇ ಪೂರ್ಣವಾಗಿದ್ದು, ಇದು ಮತ್ತಷ್ಟು ಆಳವಾಗಿ, ಇನ್ನಷ್ಟು ದಿನಗಳ ವರೆಗೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
























