ಅಜಾನ್‌ ಧ್ವನಿ ಹೆಚ್ಚಳ : ದೂರು ದಾಖಲು

ಅನುಮತಿ ಪಡೆಯದೆ ಧ್ವನಿವರ್ಧಕ ಬಳಕೆ ಎಂದು ಆರೋಪ

ಬಂಟ್ವಾಳ: ಅಜಾನ್ ಧ್ವನಿ ಹೆಚ್ಚಾಗಿ ಸಾರ್ವಜನಿಕರಿಗೆ ತೊಂದರೆ ನೀಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿರುವ ಧಾರ್ಮಿಕ ಶಿಕ್ಷಣದ ಕಟ್ಟಡವೊಂದರಲ್ಲಿ ಇತ್ತೀಚಿಗೆ ನಿರ್ಮಾಣವಾಗಿರುವ ಧಾರ್ಮಿಕ ಕೇಂದ್ರದಲ್ಲಿ ಅನುಮತಿ ಪಡೆಯದೆ ಧ್ವನಿವರ್ಧಕ ಅಳವಡಿಸಿಕೊಂಡು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 5 ಬಾರಿ ಅಜಾನ್ ಕೂಗಿರುವುದರಿಂದ ಸುತ್ತಮುತ್ತಲಿನ ಪರಿಸರದಲ್ಲಿರುವ ಜನರಿಗೆ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.





















































 
 

ಧ್ವನಿವರ್ಧಕ ಬಳಕೆಯ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂಬುದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಬಂಟ್ವಾಳ ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top