ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಕೆ.ವಿ.ಜಿ. ವೈದ್ಯಕೀಯ ಆಸ್ಪತ್ರೆ ಮತ್ತು ಮಹಾವಿದ್ಯಾಲಯ ಸುಳ್ಯ ಇವರ ಸಹಕಾರದಲ್ಲಿ , ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಉಚಿತ ಬೃಹತ್ ವೈದ್ಯಕೀಯ ಶಿಬಿರ ಭಾನುವಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ರಥಬೀದಿಯಲ್ಲಿ ಇರುವ ನೂತನ ಧರ್ಮಸಮ್ಮೇಳನ ಮಂಟಪದಲ್ಲಿ ನಡೆಯಿತು.
ಸಂಪುಟ ನರಸಿಂಹ ಸ್ವಾಮಿ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕ ಡಾಟ ರವಿ ಕಕ್ಕೆಪದವು ಅಧ್ಯಕ್ಷತೆ ವಹಿಸಿದ್ದರು.
ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತ ಕಲ್ಲಾಜೆ, ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಎಲುಬು ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ.ರಂಗನಾಥ್ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪತ್ರಕರ್ತರಾದ ಅಧ್ಯಕ್ಷ ಹರೀಶ್ ಬಂಟ್ವಾಳ್, ಪಿ.ಬಿ.ಹರೀಶ್ ರೈಯವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ನ ಅಧ್ಯಕ್ಷ ಎಚ್ .ಎಲ್ ವೆಂಕಟೇಶ್, ಸುದ್ದಿ ಸುಳ್ಯ ಹಬ್ಬ ಸುಬ್ರಹ್ಮಣ್ಯ ಗ್ರಾಮ ಸಮಿತಿ ಗೌರವಾಧ್ಯಕ್ಷ ಅಶೋಕ್ ಮೂಲೆಮನೆ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ವಿಮಲಾ ರಂಗಯ್ಯ,, ಕುಕ್ಕೆಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ಸಂತೋಷ್ ಕುಲ್ಕುಂದ, ಪ್ರೆಸ್ ಕ್ಲಬ್ ನ ಅಧ್ಯಕ್ಷ ರತ್ನಾಕರ ಸುಬ್ರಹ್ಮಣ್ಯ, ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಗುಣವತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯ ಹರಿಣಿ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಸೇವಾ ಧೀಕ್ಷಿತೆ ಲತಾ, ವಾಣಿ ವನಿತಾ ಸಮಾಜದ ಪುಷ್ಪಾ, ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘದ ಉಮೇಶ್ ಕಮೂಲೆಮನೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಯಜ್ಞೇಶ್ ಆಚಾರ್ ಉಪಸ್ಥಿತರಿದ್ದರು. ಗೌರಿತಾ ಕೆ.ಜಿ ಪ್ರಾರ್ಥಸಿದರು. ವಿಮಲಾ ರಂಗಯ್ಯ ಸ್ವಾಗತಿಸಿದರು, ಜೀವಿತ್ ವಂದಿಸಿದರು. ವಿಶ್ವನಾಥ ನಡುತೋಟ ಕಾರ್ಯಕ್ರಮ ನಿರೂಪಿಸಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಹಾಗೂ ನೌಕರ ವೃಂದ, ಶ್ರೀ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠ, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಸುದ್ದಿ ಸುಳ್ಯ ಹಬ್ಬ ಸುಬ್ರಹ್ಮಣ್ಯ ಗ್ರಾಮ ಸಮಿತಿ, ಜೇಸಿಐ ಸುಬ್ರಹ್ಮಣ್ಯ ಕುಕ್ಕೆಶ್ರೀ, ಇನ್ನರ್ ವೀಲ್ ಕ್ಲಬ್ ಸುಬ್ರಹ್ಮಣ್ಯ, ಕುಕ್ಕೆಶ್ರೀ ಆಟೋ ಚಾಲಕ ಮಾಲಕರ ಸಂಘ ಲ, ಸುಬ್ರಹ್ಮಣ್ಯ ಬಿ.ಎಂ.ಎಸ್. ಆಟೋ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ, ಸುಬ್ರಹ್ಮಣ್ಯ ಟ್ಯಾಕ್ಸಿ ಮಾಲಕ ಚಾಲಕರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೋಲಿಸ್ ಠಾಣೆ, ಓಂ ಶ್ರೀ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ, ಅನುಗ್ರಹ ಎಜುಕೇಶನ್ ಟ್ರಸ್ಟ್ ಸುಬ್ರಹ್ಮಣ್ಯ, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಟ್ಯಾಕ್ಸಿ ಮತ್ತು ಗೂಡ್ಸ್ ಚಾಲಕ ಮಾಲಕರ ಸಂಘ ಸುಬ್ರಹ್ಮಣ್ಯ, ಸ್ತ್ರೀ ಶಕ್ತಿ ಗುಂಪುಗಳು ಹಾಗೂ ವಾಣಿ ವನಿತಾ ಸಮಾಜ ಸುಬ್ರಹ್ಮಣ್ಯ, ನವೋದಯ ಸ್ವ-ಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ. ಅಖಿಲ ಭಾರತ ಅಯ್ಯಪ್ಪ ಸೇವಾ ಸಂಘ ಸುಬ್ರಹ್ಮಣ್ಯ, ವರ್ತಕರ ಸಂಘ ಸುಬ್ರಹ್ಮಣ್ಯ, ಹೊಸಬೆಳಕು ಚಾರಿಟೇಬಲ್ ಟ್ರಸ್ಟ್ ಸುಬ್ರಹ್ಮಣ್ಯ. ಮತ್ತಿತರರ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ಜರಗಿತು.
























