ಸೆ.13: ಆದರ್ಶ ವಿವಿಧೋದ್ಧೇಶ ಸಹಕಾರಿ ಸಂಘದ ಮಹಾಸಭೆ | ವಿದ್ಯಾ ನಿಧಿಯಿಂದ 250 ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ

ಪುತ್ತೂರು: ಕಳೆದ 23 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ದ.ಕ.ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ 15 ಶಾಖೆಗಳನ್ನು ಹೊಂದಿರುವ ಪುತ್ತೂರಿನ ಆದರ್ಶ ವಿವಿಧೋದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾ ಸಂಸ್ಥೆಯ ನಿಧಿಯಿಂದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣಾ ಸಮಾರಂಭವು ಸೆ.13 ರಂದು ದರ್ಬೆ ಪ್ರಶಾಂತ್ ಮಹಲ್‌ನ ಸನ್ನಿಧಿ ಹಾಲ್‌ನಲ್ಲಿ ನಡೆಯಲಿದೆ ಎಂದು ಸಂಘದ ನಿರ್ದೇಶಕರಾದ ಅಶ್ವಿನ್ ಎಲ್ ಶೆಟ್ಟಿ ತಿಳಿಸಿದ್ದಾರೆ.

ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ ಜೈರಾಜ್ ಬಿ ರೈ ಉದ್ಘಾಟಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ್ ಜಿ ಎಸ್ ಸಹಾಯಧನ ವಿತರಣೆ ಮಾಡಲಿದ್ದಾರೆ. ಕೈಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ರೈ ಎ.ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಂಸ್ಥೆಯ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿದ್ಯಾ ಸಂಸ್ಥೆಯ ನಿಧಿಯಿಂದ ಸಹಾಯಧನ ವಿತರಿಸಿಕೊಂಡು ಬರಲಾಗುತ್ತಿದ್ದು, ಈ ತನಕ ಒಟ್ಟು 1295 ವಿದ್ಯಾರ್ಥಿಗಳಿಗೆ ರೂ.. 26,29,000  ವಿತರಣೆ ಮಾಡಲಾಗಿದೆ. ಈ ಬಾರಿ 7ನೇ ಮತ್ತು 8ನೇ ತರಗತಿಯಲ್ಲಿ ಕಲಿಯುತ್ತಿರುವ 250 ವಿದ್ಯಾರ್ಥಿಗಳಿಗೆ ತಲಾ ರೂ. 2 ಸಾವಿರದಂತೆ ವಿತರಣೆ ಮಾಡಲಾಗುವುದು. 





















































 
 

ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 23 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ  ತಾಲೂಕಿನಲ್ಲಿ 15 ಶಾಖೆಗಳ ಮೂಲಕ ನಡೆಸಿಕೊಂಡು ಬರುತ್ತಿದೆ. ೨2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಘವು ರೂ.829.88 ಕೋಟಿ ದಾಖಲೆಯ ವ್ಯವಹಾರವನ್ನು ನಡೆಸಿ ರೂ. 2.11 ಕೋಟಿ ಲಾಭವನ್ನು ಗಳಿಸಿರುತ್ತದೆ. ಸಂಘದ 2024-25ನೇ ಆರ್ಥಿಕ ಸಾಲಿನ ಅಂತ್ಯಕ್ಕೆ ಸಂಘದಲ್ಲಿ 8919 ಸದಸ್ಯರಿದ್ದು, ಒಟ್ಟು ರೂ. 3.39  ಕೋಟಿ ಪಾಲು ಬಂಡವಾಳವನ್ನು ಹೊಂದಿರುತ್ತದೆ. ಸಂಘ ರೂ. 150.95 ಕೋಟಿ ಠೇವಣಿಯನ್ನು ಹೊಂದಿದ್ದು, ರೂ..133.64 ಕೋಟಿ ಸಾಲ ವಿತರಿಸಿದೆ. 2.84 ಕೋಟಿ ಕ್ಷೇಮ ನಿಧಿ, . 3.79 ಕೋಟಿ ಇತರ ನಿಧಿ ಮತ್ತು 161.04 ದುಡಿಯುವ ಬಂಡವಾಳವನ್ನು ಹೊಂದಿರುತ್ತದೆ. ಸಂಘವು ಸ್ಥಾಪನೆಗೊಂಡ ವರ್ಷದಿಂದ ತನ್ನ ಸದಸ್ಯರಿಗೆ ಡಿವಿಡೆಂಡ್ ನೀಡಿಕೊಂಡು ಬರುತ್ತಿದ್ದು, ಆಡಿಟ್ ವರ್ಗದಲ್ಲಿ ಸತತವಾಗಿ “ಎ” ತರಗತಿಯನ್ನು ಕಾಯ್ದುಕೊಂಡಿದೆ. ಕಳೆದ ವರ್ಷ ಶೇ. 16  ಡಿವಿಡೆಂಡ್ ನೀಡಲಾಗಿದೆ ಎಂದರು.

ಸಂಘದ ಕೇಂದ್ರ ಕಚೇರಿಗೆ ಸ್ವಂತ ಕಟ್ಟಡ ನಿರ್ಮಾಣವು ಪ್ರಗತಿಯಲ್ಲಿದೆ. ಸಂಘವು 25 ವರ್ಷ ಪೂರೈಸುವ ಸಂದರ್ಭದಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು. ಪ್ರಸ್ತುತ ವರ್ಷ ಮಂಗಳೂರಿನ ಪಾಂಡೇಶ್ವರದಲ್ಲಿ ಮತ್ತು ಪುತ್ತೂರಿನ ಈಶ್ವರಮಂಗಲದಲ್ಲಿ 65ನೇ ಮತ್ತು 17ನೇ ಶಾಖೆಗಳನ್ನು ಅತೀ ಶೀಘ್ರದಲ್ಲಿ ತೆರೆಯಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಎನ್.ಸುಂದರ ರೈ, ನಿರ್ದೇಶಕ ಜೈರಾಜ್ ಭಂಡಾರಿ ನೋಣಾಲು, ಮಹಾಪ್ರಬಂಧಕ ವಸಂತ ಜಾಲಾಡಿ ಮತ್ತು ಸಹಾಯಕ ಮಹಾಪ್ರಬಂಧಕ ಸುನಾದ್ ರಾಜ್ ಶೆಟ್ಟಿ ಉಪಸ್ಥಿತರಿದ್ದರು.

error: Content is protected !!
Scroll to Top