ಹಿಂದೂ ಸಂಘಟನೆಗಳ ಚಾಮುಂಡಿ ಚಲೋ ಪಾದಯಾತ್ರೆಗೆ ಪೊಲೀಸರಿಂದ ತಡೆ

ಪೊಲೀಸರ ಜೊತೆ ವಾಗ್ವಾದ, ಹಲವು ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಇಂದು ಮೈಸೂರಿನಲ್ಲಿ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಪಾದಯಾತ್ರೆಯನ್ನು ಪೊಲೀಸರು ತಡೆದು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಇಂದು ಚಾಮುಂಡಿ ಚಲೋ ಪಾದಯಾತ್ರೆಗೆ ಕರೆ ನೀಡಲಾಗಿತ್ತು. ಇನ್ನೊಂದು ಕಡೆ ಬಾನು ಮುಷ್ತಾಕ್ ಆಯ್ಕೆ ಸಮರ್ಥಿಸಿ ಪಾದಯಾತ್ರೆ ನಡೆಸಲು ದಲಿತ ಸಂಘಟನೆಗಳು ಕರೆ ನೀಡಿದ್ದವು. ಈ ಎರಡೂ ಪಾದಯಾತ್ರೆಗಳಿಗೆ ಪೊಲೀಸರು ಅನುಮತಿ ನೀಡಿರಲಿಲ್ಲ. ಅನುಮತಿ ಇಲ್ಲದಿದ್ದರೂ ಹಿಂದೂ ಜಾಗರಣಾ ವೇದಿಕೆಯ ಸದಸ್ಯರು ಪಾದಯಾತ್ರೆ ಮಾಡುವುದಾಗಿ ಪಟ್ಟು ಹಿಡಿದಿದ್ದರು. ಹೀಗಾಗಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು.





















































 
 

ಬೆಳಗ್ಗೆ ಪಾದಯಾತ್ರೆ ನಡೆಸಲು ಆಗಮಿಸಿದ ಹಿಂದೂ ಮತ್ತು ಬಿಜೆಪಿ ಮುಖಂಡರನ್ನು ಪೊಲೀಸರು ತಡೆದರು. ಕುರುಬರಹಳ್ಳಿ ಸರ್ಕಲ್ ಬಳಿ ಹೈಡ್ರಾಮಾ ನಡೆದು ಪೊಲೀಸರ ಜೊತೆ ವಾಗ್ವಾದ ನಡೆಯಿತು. ಕೊನೆಗೆ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ ಸೇರಿದಂತೆ ಹಲವು ಮುಖಂಡರು, ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದರು.

ಬಾನು ಮುಷ್ತಾಕ್ ಆಯ್ಕೆ ಪರವಾಗಿ ಚಾಮುಂಡಿ ಬೆಟ್ಟಕ್ಕೆ ಹೋಗಲು ದಲಿತ ಮಹಾಸಭಾದ ರಾಜ್ಯಾಧ್ಯಕ್ಷನ ರಾಜೇಶ್ ಆಗಮಿಸಿದ್ದರು. ಪ್ರತಿಭಟನೆಗೆ ಬರುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಅವರು ಪ್ರತಾಪ್‌ ಸಿಂಹ ಅವರಿಗೆ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

ಚಾಮುಂಡಿ ಬೆಟ್ಟಕ್ಕೆ ಹೋಗುವ ಪ್ರತಿಯೊಂದು ರಸ್ತೆಯಲ್ಲೂ ನಾಕ ಬಂದಿ ಹಾಕಲಾಗಿತ್ತು. ಪ್ರತಿಭಟನಕಾರನ್ನು ಕರೆದುಕೊಂಡು ಹೋಗಲು ಹೆಚ್ಚಿನ ಪೊಲೀಸ್ ವಾಹನಗಳ ನಿಯೋಜನೆ ಮಾಡಲಾಗಿತ್ತು. ಸ್ಥಳಕ್ಕೆ ಡಿಸಿಪಿಗಳಾದ ಸುಂದರ್ ರಾಜ್, ಬಿಂದುಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

error: Content is protected !!
Scroll to Top