ಸುಳ್ಯ: ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಯುವಕನೊಬ್ಬನ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಕಾಣಿಯೂರಿನ ಪುಂಚತ್ತಾರು ಎಂಬಲ್ಲಿ ಕಾಲೇಜು ವಿದ್ಯಾರ್ಥಿನಿ ಸಂಜೆ ರಸ್ತೆ ಬದಿ ನಡೆದುಕೊಂಡು ಮನೆಗೆ ಹೋಗುವಾಗ ಪೆರ್ಲಂಪಾಡಿಯ ಉದಯ ಎಂಬವನು ಬೈಕಿನಲ್ಲಿ ಬಂದು ವಿದ್ಯಾರ್ಥಿನಿಯ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ವಿದ್ಯಾರ್ಥಿನಿ ಮನೆಯವರ ಜತೆಗೆ ಬೆಳ್ಳಾರೆಗೆ ಬಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ ಎನ್ನಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ತನಿಖೆ ಆರಂಭಿಸಿದರು. ಯುವತಿಗೆ ಯುವಕನ ಪರಿಚಯ ಇಲ್ಲದ ಕಾರಣ ಘಟನೆ ನಡೆದ ಸ್ಥಳದ ಸುತ್ತಮುತ್ತದ ಸುಮಾರು 15 ಸಿ.ಸಿ. ಕ್ಯಾಮರಾಗಳನ್ನು ಪರಿಶೀಲಿಸಿದಾಗ ವಿದ್ಯಾರ್ಥಿನಿ ಹೇಳಿದ ಸಮಯದಲ್ಲಿ ಹೋದ ಬೈಕ್ ಯಾವುದೆಂದು ಪತ್ತೆ ಹಚ್ಚಿ ಅದರ ನಂಬರಿನ ಆಧಾರದಲ್ಲಿ ಪೆರ್ಲಂಪಾಡಿಯ ಉದಯ ಎಂಬವನನ್ನು ವಿಚಾರಣೆಗೊಳಪಡಿಸಿದಾಗ ಆತನೇ ಕೃತ್ಯ ಮಾಡಿದವನೆಂದು ಖಚಿತ ಪಡಿಸಲಾಗಿದೆ. ಕೇಸು ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ಆರೋಪಿಯನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
























