ಹೆದ್ದಾರಿ ಗುಂಡಿಗೆ ಬಿದ್ದ ಸ್ಕೂಟರ್‌ : ಮಹಿಳೆ ದುರ್ಮರಣ

ರಸ್ತೆಗೆ ಬಿದ್ದ ಮಹಿಳೆ ಮೇಲೆ ಹರಿದು ಹೋದ ಟ್ರಕ್‌

ಮಂಗಳೂರು: ಮಂಗಳೂರು ಹೊರವಲಯದ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಆಸ್ಪತ್ರೆಯೊಂದರಸಿಬ್ಬಂದಿ ಮಾಧವಿ ಎಂಬ ಮಹಿಳೆ ದುರ್ಮರಣಕ್ಕೀಡಾಗಿದ್ದಾರೆ. ಅವರು ಚಲಾಯಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ದೊಡ್ಡ ಗುಂಡಿಗೆ ಬಿದ್ದಿದ್ದು, ಅದೇ ವೇಳೆ ಹಿಂದಿನಿಂದ ಬಂದ ಮೀನಿನ ಟ್ರಕ್ ಅವರ ಮೇಲೆ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವಿಗೀಡಾದರು.

ಈ ದಾರುಣ ಘಟನೆ ಸ್ಥಳೀಯರಲ್ಲಿ ಆಕ್ರೋಶವನ್ನುಂಟು ಮಾಡಿದ್ದು, ಮೂಲ್ಕಿಯಿಂದ ಪಂಪ್‌ವೆಲ್‌ಗೆ ಸಾಗುವ ಹೆದ್ದಾರಿಯ ದುಸ್ಥಿತಿಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಈ ಮಾರ್ಗದಲ್ಲಿ ಹಲವಾರು ದೊಡ್ಡ ಗುಂಡಿಗಳು ಇರುವುದರಿಂದ ದಿನಕ್ಕೊಂದು ಅಪಘಾತ ಸಂಭವಿಸುವಂತಹ ಪರಿಸ್ಥಿತಿಯಿದೆ ಎಂದು ಸ್ಥಳೀಯರು ದೂರಿದ್ದಾರೆ.





















































 
 

ರಸ್ತೆ ದುರಸ್ತಿಗಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ನಿರ್ಲಕ್ಷ್ಯ ಮುಂದುವರಿದಿದೆ. ಇಂತಹ ದುರ್ಘಟನೆಗಳು ನಡೆದ ಬಳಿಕ ಮಾತ್ರ ತುರ್ತು ಕ್ರಮ ಕೈಗೊಳ್ಳುವ ನಿಯಮವಾಗಿಬಿಟ್ಟಿದೆ ಎಂದು ಜನರು ಆಕ್ರೋಶಗೊಂಡಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಇನ್ನೂ ಅನೇಕ ಅಮೂಲ್ಯ ಜೀವಗಳು ಈ ಅಪಾಯಕಾರಿ ರಸ್ತೆಯ ಗುಣಡಿಗೆ ಬಲಿಯಾಗಬಹುದು ಎಂದು ಎಚ್ಚರಿಸಿದ್ದಾರೆ.

error: Content is protected !!
Scroll to Top