ಶಿವಮೊಗ್ಗ: ಭದ್ರಾವತಿಯ ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನಕ್ಕೆ ಜೈಕಾರ ಹಾಕಿದ ಘಟನೆ ನಡೆದಿದೆ.
ಸೋಮವಾರ ರಾತ್ರಿ ಮುಸ್ಲಿಮರು ಈದ್ ಮಿಲಾದ್ ಮೆರವಣಿಗೆ ನಡೆಸಿದ್ದು, ಅದರಲ್ಲಿ ಪಾಲ್ಗೊಂಡವವರು ತರೀಕೆರೆ ರಸ್ತೆಯ ಗಾಂಧಿ ವೃತ್ತದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ವಿಡಿಯೋ ವೈರಲ್ ಆಗಿದೆ.
ಈ ಸಂಬಂಧ ಭದ್ರಾವತಿಯಲ್ಲಿ ಪ್ರಕರಣ ದಾಖಲಾಗಿದ್ದು, ವಿಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುವುದಾಗಿಯೂ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ತನಿಖೆಗಾಗಿ ಮೂರು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.


























