ವಿಚಾರಣೆ ಮುಗಿದ ಬಳಿಕ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳಿವೆ ಎಂದ ವಿಠಲ ಗೌಡ
ಧರ್ಮಸ್ಥಳ: ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳ ರಾಶಿ ಸಿಕ್ಕಿದೆ ಎಂದು ಸೌಜನ್ಯಾಳ ಮಾವ ವಿಠಲ ಗೌಡ ಹೇಳಿರುವುದು ನಿನ್ನೆಯಿಂದೀಚೆಗೆ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಹೊಸ ತಿರುವುದು ನೀಡಿದೆ. ಎಸ್ಐಟಿ ವಿಚಾರಣೆ ಬಳಿಕ ವಿಠಲ್ ಗೌಡ ಖಾಸಗಿ ವಾಹಿನಿಗೆ ನೀಡಿದ ವಿಠಲ ಗೌಡ ಬಂಗ್ಲೆಗುಡ್ಡೆ ಕಾಡಿನಲ್ಲಿ ಹೆಣಗಳ ರಾಶಿ ಸಿಕ್ಕಿದೆ ಎಂದು ಹೇಳಿಕೊಂಡಿದ್ದಾರೆ ಎಂಬ ಹೇಳಿಕೆ ಸಂಚಲನ ಸೃಷ್ಟಿಸಿದೆ.
ಬುರುಡೆ ಪ್ರಕರಣ ಸಂಬಂಧ ವಿಠಲ ಗೌಡ ಅವರನ್ನು ಎಸ್ಐಟಿ ಅಧಿಕಾರಿಗಳು ಸತತ ವಿಚಾರಣೆಗೊಳಪಡಿಸಿದ್ದಾರೆ. ಬಂಗ್ಲೆಗುಡ್ಡೆಯ ಕೆಲವು ಜಾಗಗಳಿಗೆ ಕರೆದೊಯ್ದು ಸ್ಥಳ ಮಹಜರು ಮಾಡಿದ್ದು, ಸ್ಥಳ ಮಹಜರು ವೇಳೆ ಮಾಹಿತಿಯನ್ನು ವಿಠಲ ಗೌಡ ಬಹಿರಂಗಪಡಿಸಿದ್ದಾರೆ. ಬಂಗ್ಲೆಗುಡ್ಡೆಗೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದು, ಆ ವೇಳೆ ಹೆಣಗಳ ರಾಶಿ ಸಿಕ್ಕಿದೆ ಎಂದು ವಿಠಲ ಗೌಡ ವಿಡಿಯೋನಲ್ಲಿ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಬುರುಡೆ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.
ವಿಡಿಯೋ ಬಿಡುಗಡೆ ಮಾಡಿರುವ ವಿಠಲ ಗೌಡ, ಬಂಗ್ಲೆಗುಡ್ಡೆಗೆ ಎರಡು ಸಲ ಸ್ಥಳ ಮಹಜರಿಗೆ ನನ್ನನ್ನು ಕರೆದುಕೊಂಡು ಹೋಗಿದ್ದು, ಅಲ್ಲಿ ಮೂರು ಮನುಷ್ಯರ ಕಳೆಬರಹಗಳು ಸಿಕ್ಕಿವೆ. ಹತ್ತಿರ ಹತ್ತಿರ ಹತ್ತು ಫೀಟ್‌ಗಳಲ್ಲಿ ಎರಡನೇ ಬಾರಿಗೆ ಸ್ಥಳ ಮಹಜರಿಗೆ ಹೋದಾಗ ಹೆಣಗಳ ರಾಶಿ ಸಿಕ್ಕಿದೆ. ಕಣ್ಣಿಗೆ ಕಂಡದ್ದು 5 ಹೆಣಗಳು. ಸಣ್ಣ ಮಗುವಿನ ಎಲುಬು ಇದೆ ಅಂತ ಗೋಚರ ಆಗುತ್ತಿತ್ತು ಎಂದು ಹೇಳಿಕೊಂಡಿದ್ದಾರೆ.
ವಾಮಾಚಾರಕ್ಕೆ ಬಳಸುವ ವಸ್ತುಗಳು ಕೂಡಾ ಸಿಕ್ಕಿದೆ. ಹೂತಿಟ್ಟ ಶವಗಳನ್ನು ಕಾಣದ ಹಾಗೇ ಮಾಡಲು ಮಣ್ಣು ತೆಗೆದು ಹಾಕಿದ ಹಾಗೇ ಕಾಣುತ್ತಿತ್ತು. ಐದಾರು ಫೀಟ್‌ನಲ್ಲಿ ಬುರುಡೆ ರಾಶಿ ಇದೆ. ಎಲುಬು ಅಲ್ಲಲ್ಲಿ ಸ್ಪ್ರೆಡ್ ಆಗಿದೆ. ಕಳೆಬರಹಗಳು ಅಲ್ಲಲ್ಲಿ ಇದ್ದವು, ಬುರುಡೆಗಳು ಮಣ್ಣಲ್ಲಿ ಎದ್ದು ಕಾಣುತ್ತಿತ್ತು. ನೋಡಿದ ಬುರುಡೆಗಳು ಹಾಗೆ ಇವೆ. ಆದರೆ ಅದನ್ನು ಮುಟ್ಟಿಲ್ಲ. ತನಿಖೆಗೆ ಯಾವಾಗ ಕರೆದ್ರು ಬರ್ತೇನೆ ಎಂದು ಹೇಳಿದ್ದೇವೆ. ಚಿನ್ನಯ್ಯ, ತಾನಸಿ, ರಂಗ, ಸುಬ್ರಹ್ಮಣ್ಯ ಎಲ್ಲ ಹೇಳಿದ್ದಾರೆ. ಅವರ ಮಾಹಿತಿ ಪ್ರಕಾರ ಎಲ್ಲ ತೋರಿಸಲು ರೆಡಿ ಇದ್ದೇನೆ. ಅದೇ ಊರಲ್ಲಿ ಇದ್ದು ಒಂದೇ ಕಡೆ ರಾಶಿ ಹಾಕಿದ್ದು ನೋಡಿ ಅಚ್ಚರಿ ಆಗಿದೆ. ಚಿನ್ನಯ್ಯ ಹೇಳಿದ್ದು ನೂರಕ್ಕೆ ನೂರು ಸತ್ಯ. ಅದರಲ್ಲಿ ಯಾವುದೇ ಡೌಟ್ ಇಲ್ಲ ಎಂದು ಹೇಳಿದ್ದಾರೆ.
























