ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ದ. ಕ ಜಿಲ್ಲೆ ಮಂಗಳೂರು ಆಶ್ರಯದಲ್ಲಿ ಸೆ.10 ರಂದು ಮಂಗಳೂರಿನ ಸಂತ ಅಲೋಶಿಯಸ್ ಪ. ಪೂ ಕಾಲೇಜಿನಲ್ಲಿ ನಡೆದ ‘ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ಐದು ವಿದ್ಯಾರ್ಥಿಗಳು ಪಾಲ್ಗೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ದ್ವಿತೀಯ ವಿಜ್ಞಾನ ವಿಭಾಗದ ಪ್ರಾಧಿ ಕ್ಲಾರೆ ಪಿಂಟೋ 3 ಚಿನ್ನ, ದಿಗಂತ್ ವಿ ಎಸ್ 2ಚಿನ್ನ ಮತ್ತು 2 ಬೆಳ್ಳಿ,, ಅನ್ವಿತ್ ರೈ 2 ಚಿನ್ನ ಮತ್ತು 2 ಬೆಳ್ಳಿ, ಆರ್ ಅಮನ್ ರಾಜ್ 3 ಬೆಳ್ಳಿ ಮತ್ತು 1 ಕಂಚು ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ತನುಶ್ರೀ ಎಸ್ ಗೌಡ 2 ಬೆಳ್ಳಿ ಮತ್ತು 1 ಕಂಚು ಪದಕವನ್ನು ಪಡೆದುಕೊಂಡು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ದ್ವಿತೀಯ ವಿಜ್ಞಾನ ವಿಭಾಗದ ಅಧೀನ್ ರೈ ಬಿ 1 ಬೆಳ್ಳಿ ಪದಕವನ್ನು ಪಡೆದುಕೊಂಡಿರುತ್ತಾರೆ. ಈಜು ತರಬೇತುದಾರರಾದ ಪಾರ್ಥ ವಾರಣಾಸಿ ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
























