ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದಿಂದ ನಿರ್ಮಾಣಗೊಳ್ಳುತ್ತಿರುವ ನೂತನ ಸಮುದಾಯ ಭವನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿ | ಸಮುದಾಯ ಭವನಕ್ಕೆ ಅನುದಾನ ಒದಗಿಸುವ ಭರವಸೆ

ಕಡಬ: ಒಕ್ಕಲಿಗ ಗೌಡ ಸಮುದಾಯ ಭವನಕ್ಕೆ ಮಂಗಳೂರು ಸಂಸದ ಕ್ಯಾ.ಬ್ರಿಜೇಶ್ ಚೌಟ ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿ ನೀಡಿದರು.

ಒಕ್ಕಲಿಗ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ಒಕ್ಕಲಿಗ ಗೌಡ ಸೇವಾ ಸಂಘದ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅವರು ಮಾತನಾಡಿ, ಸಮುದಾಯ ಭವನಕ್ಕೆ ಸರಕಾರದಿಂದ ಅನುದಾನ ಒದಗಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಗೌಡ ಪುಯಿಲ, ಉಪಾಧ್ಯಕ್ಷರಾದ ತಮ್ಮಯ್ಯ ಗೌಡ ಸುಳ್ಯ, ಕಾರ್ಯದರ್ಶಿಗಳಾದ ಪ್ರಶಾಂತ್ ಪಂಜೋಡಿ, ನಿರ್ದೇಶಕರಾದ ಆಶಾ ತಿಮ್ಮಪ್ಪ ಗೌಡ, ತಾಲೂಕು ಸಲಹಾ ಸಮಿತಿಯ ಸದಸ್ಯರಾದ ಜನಾರ್ಧನ ಗೌಡ ಪಣೆಮಜಲು, ದೇವಣ್ಣ ಗೌಡ ನೆಲ್ಲ, ತಾಲೂಕು ಯುವ ಸಮಿತಿಯ ಅಧ್ಯಕ್ಷರಾದ ಪೂರ್ಣೇಶ್ ಗೌಡ ಬಲ್ಯ, ತಾಲೂಕು ಮಹಿಳಾ ಸಮಿತಿಯ ಅಧ್ಯಕ್ಷರಾದ ವೀಣಾ ರಮೇಶ್ ಕೊಲ್ಲೆಸಾಗು, ಭಾರತೀಯ ಜನತಾ ಪಾರ್ಟಿಯ ರಾಜ್ಯ ಕಾರ್ಯಕಾರಣಿಯ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯದರ್ಶಿಗಳಾದ ಕೃಷ್ಣ ಎಂ.ಆರ್, ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷರಾದ ಶ್ರೀಕಾಂತ್ ಮಾವಿನಕಟ್ಟೆ ಮತ್ತು ವಿವಿಧ ಜವಾಬ್ದಾರಿಯುತ ಪ್ರಮುಖರು, ಒಕ್ಕಲಿಗ ಗೌಡ ಸೇವಾ ಸಂಘದ ತಾಲೂಕು ಮಾತೃ ಸಮಿತಿಯ ನಿರ್ದೇಶಕರು,‌ತಾಲೂಕು ಯುವ ಮತ್ತು ಮಹಿಳಾ ಸಮಿತಿಯ ಪದಾಧಿಕಾರಿಗಳು ಹಾಗೂ ವಿವಿಧ ಸಮಿತಿಯ ಜವಾಬ್ದಾರಿಯುತ ಪದಾಧಿಕಾರಿಗಳು, ಸ್ಥಾಪಕ ಸದಸ್ಯರು, ಸಹೃದಯಿ ಸಮುದಾಯ ಭಾಂದವರು ಉಪಸ್ಥಿತರಿದ್ದರು. ಸಂಘದ ವ್ಯವಸ್ಥಾಪಕರಾದ ಅಶೋಕ್ ಶೇಡಿ ವಂದಿಸಿ, ಕಾರ್ಯಕ್ರಮ ನಿರ್ವಹಿಸಿದರು.





















































 
 
error: Content is protected !!
Scroll to Top