ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಮೈಸೂರಿನ ಗೋಪಾಲಸ್ವಾಮಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ಪಡೆಯುವ ಮೂಲಕ ಝೋನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ ೯ನೇ ತರಗತಿಯ ವಿದ್ಯಾರ್ಥಿ ಸಾತ್ವಿಕ್ ಜಿ ಪ್ರಥಮ ಸ್ಥಾನ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿನಿ ಮಂದಿರಾ ಕಜೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಮುಂದೆ ನಡೆಯುವ ಝೋನಲ್ ಹಂತದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ೧೦ನೇ ತರಗತಿ ವಿದ್ಯಾರ್ಥಿಗಳಾದ ಪ್ರಿಯಾಂಶು ರಾವ್, ಕನಿ? ಎನ್ ಶೆಟ್ಟಿ ಹಾಗೂ ೯ನೇ ತರಗತಿ ವಿದ್ಯಾರ್ಥಿ ಅನಿತೇಜ್ ಎಮ್. ಸಾಲೆ ಅವರ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.
























