ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ

ವಿಟ್ಲ ವಲಯದ ವಿಟ್ಲ ಮೂಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡುತ್ತಾರು ರವರು ಮಾಡಿ ಯೋಜನೆಯ ಕಾರ್ಯಕ್ರಮಗಳ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಯಾಗಿ ಯೋಜನಾಧಿಕಾರಿ ಸುರೇಶ್ ಗೌಡ ಮಾತನಾಡಿ ಯೋಜನೆ ನಡೆದು ಬಂದ ದಾರಿ, ಯೋಜನೆ ಹಿನ್ನಲೆ, ಒಕ್ಕೂಟದ ಜವಾಬ್ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಅತಿಥಿಯಾಗಿ ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಮಾತನಾಡಿ ಯೋಜನೆಯ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇಣುಗೋಪಾಲ್ ರವರು ಶುಭ ಹಾರೈಸಿದರು. ವೇದಿಕೆಯಲ್ಲಿ ವಿಟ್ಲ ವಲಯದ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ, ವಿಪತ್ತು ಘಟಕದ ಅಧ್ಯಕ್ಷರಾದ ಚಂದ್ರಹಾಸ, ಸಭಾಭವನದ ಸದಸ್ಯರಾದ ಸಂಜೀವ ಪೂಜಾರಿ, ವಲಯದ ಮೇಲ್ವಿಚಾರಕರಾದ ಜಗದೀಶ್ ಪೂಜಾರಿ ಉಪಸ್ಥಿತರಿದ್ದರು.





















































 
 

ಸಭೆಯ ಅಧ್ಯಕ್ಷತೆಯನ್ನು ಬಾಲಕೃಷ್ಣ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಸುಂದರ ಪೂಜಾರಿ ಕೆಡಿಗೆದಡಿ, ಕಾರ್ಯಕ್ರಮದ ನಿರೂಪಣೆಯನ್ನು ಹರೀಶ್ ಪೂಜಾರಿ, ಧನ್ಯವಾದವನ್ನು ಸೌಮ್ಯ ನಡೆಸಿದರು. ಸೇವಾಪ್ರತಿನಿಧಿ ಶ್ರೀಮತಿ ಯಶೋಧ ಮತ್ತು ಸುವಿದ ಸೇವಾದಾರರು ಶಿಲ್ಪಾ ಕಾರ್ಯಕ್ರಮಕ್ಕೆ ಸಹಕರಿಸಿದರು.

error: Content is protected !!
Scroll to Top