ನವದೆಹಲಿ: ಇಂದು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾಗಿದ್ದು, ಅವರು ತಮ್ಮ 75 ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.
ಈ ಸಂಬಂಧ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಅವರು ತಮ್ಮ ಅಸಾಧಾರಣ ನಾಯಕತ್ವ ಗುಣಗಳ ಮೂಲಕ ಭಾರತದಲ್ಲಿ ಮಹಾನ್ ಗುರಿಗಳನ್ನು ಸಾಧಿಸುವ ಸಂಸ್ಕೃತಿಯನ್ನು ಹುಟ್ಟು ಹಾಕಿದ್ದಾರೆ. ಕಠಿಣ ಪರಿಶ್ರಮದ ಪರಾಕಾಷ್ಠೆಯ ಮೂಲಕ ಮಾದರಿಯಾಗಿದ್ದಾರೆ ಎಂದು ಅವರು ನುಡಿದಿದ್ದಾರೆ.
























