ಪ್ರಧಾನಿ ಮೋದಿ ಜನ್ಮದಿನ: ಶುಭಾಶಯ ಕೋರಿ ಟ್ವೀಟ್ ಮಾಡಿದ ಅಮಿತ್ ಶಾ

ನವದೆಹಲಿ: ಪ್ರಧಾನಿ ಮೋದಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಕೋಟ್ಯಂತರ ಭಾರತೀಯರಿಗೆ ಪ್ರಧಾನಿ ಮೋದಿ ಅವರು ಸ್ಫೂರ್ತಿ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ತ್ಯಾಗ ಮತ್ತು ಸಮರ್ಪಣೆಗಳ ಸಂಕೇತ. ಕೋಟ್ಯಂತರ ದೇಶವಾಸಿಗಳಿಗೆ ‌ಸ್ಪೂರ್ತಿ. 75 ನೇ ಜನ್ಮದಿನವನ್ನು ಆಚರಣೆ ಮಾಡಿಕೊಳ್ಳುತ್ತಿರುವ ಅವರಿಗೆ ಜನ್ಮದಿನದ ಶುಭಾಶಯಗಳು. ಸಾರ್ವಜನಿಕ ಜೀವನದಲ್ಲಿ ಸುಮಾರು ಐದು ದಶಕಗಳಿಗೂ ಹೆಚ್ಚಿನ ಕಾಲ ದೇಶವಾಸಿಗಳ ಕಲ್ಯಾಣಕ್ಕಾಗಿ ನಿರಂತರವಾಗಿ, ದಣಿವರಿಯದೆ ಅವರು ದುಡಿಯುತ್ತಿದ್ದಾರೆ. ರಾಷ್ಟ್ರ ಮೊದಲು ಎಂಬ ವಿಚಾರದಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ಅವರು ಜೀವಂತ ಸ್ಫೂರ್ತಿಯಾಗಿದ್ದಾರೆ ಎಂದು ಶಾ ಬಣ್ಣಿಸಿದ್ದಾರೆ.





















































 
 

error: Content is protected !!
Scroll to Top