ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಭರ್ತಿಯಾಗದೆ ಖಾಲಿ ಉಳಿದಿರುವ 5267 ಶಿಕ್ಷಕರ ಹುದ್ದೆ ಭರ್ತಿಗೆ ‌ಕ್ರಮ ಕೈಗೊಳ್ಳುವುದಾಗಿ ಸಿ ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಈ ಭಾಗದಲ್ಲಿ SSLC ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವ ಹಿನ್ನೆಲೆಯಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ನೂತನವಾಗಿ ವಸತಿ ಶಾಲೆ, ವಸತಿ ನಿಲಯಗಳ ನಿರ್ಮಾಣಕ್ಕೂ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸುಮಾರು 204 ಕೋಟಿ ರೂ. ವೆಚ್ಚದಲ್ಲಿ 7 ಜಿಲ್ಲೆಗಳಿಗೆ ಸಂಬಂಧಿಸಿದ ಹಾಗೆ ವಸತಿ ಶಾಲೆಗಳ ನಿರ್ಮಾಣ, ಸ್ಪರ್ಧಾತ್ಮಕ ಪರೀಕ್ಷಾ ತಯಾರಿಗೆ ತರಬೇತಿ ಕೇಂದ್ರ, ನೂರು ಕೋಟಿ ರೂ. ವೆಚ್ಚದಲ್ಲಿ ಕಲಬುರ್ಗಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ 220 ಕೋಟಿ ರೂ. ಗಳನ್ನು ನೀಡುವ ಭರವಸೆಯನ್ನು ಅವರು ನೀಡಿರುವುದಾಗಿದೆ.





















































 
 
error: Content is protected !!
Scroll to Top