ಬೆಂಗಳೂರು: ವಿಶ್ವವಿಖ್ಯಾತ ನಾಡ ಹಬ್ಬ ದಸರಾವನ್ನು ಬಾನು ಮುಷ್ತಾಕ್ ಅವರು ಉದ್ಘಾಟನೆ ಮಾಡುವ ರಾಜ್ಯಸರ್ಕಾರದ ನಿರ್ಧಾರದ ವಿರುದ್ಧ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೂ ದೂರು ಹೋಗಿದೆ.
H.S. ಗೌರವ್ ಎಂಬವರು ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಈಗಾಗಲೇ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇನ್ನೇನು ನಾಡ ಹಬ್ಬ ದಸರಾ ಆಚರಣೆ ಆರಂಭವಾಗಲಿದೆ. ಹಾಗಾಗಿ ಈ ಅರ್ಜಿಯ ಶೀಘ್ರ ವಿಚಾರಣೆಗಾಗಿಯೂ ಅವರು ಮನವಿ ಮಾಡಿಕೊಂಡಿದ್ದಾರೆ. ಅರ್ಜಿ ಪುರಸ್ಕರಿಸಿರುವ ಕೋರ್ಟ್ ಇದನ್ನು ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.
























