ಬೆಂಗಳೂರು: ಚುನಾವಣಾ ಆಯೋಗ ಆಳಂದ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಅಸಹಕಾರ ತೋರಿರುವುದನ್ನು ನೋಡಿದರೆ, ಇದರಲ್ಲಿ ಅವರೂ ಭಾಗವಹಿಸಿರುವ ಬಗ್ಗೆ ಸಂದೇಹ ಮೂಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಬಗ್ಗೆ ಎಲ್ಲಾ ರೀತಿಯ ಮಾಹಿತಿಗಳನ್ನು ನಮ್ಮಿಂದ ಪಡೆದು ಮಾಧ್ಯಮ ಹೇಳಿಕೆ ನೀಡಿದ್ದಾರೆ. ಆಳಂದ ಮಾತ್ರವಲ್ಲದೆ ಇತರ ಕ್ಷೇತ್ರಗಳಲ್ಲಿಯೂ ಮತ ಅಕ್ರಮ ನಡೆದಿರುವುದಾಗಿ ಅವರು ಆರೋಪಿಸಿದ್ದಾರೆ.
ಆಳಂದ ಕ್ಷೇತ್ರಕ್ಕೆ ಸಂಬಂಧಿಸಿದ ಹಾಗೆ ಸುಮಾರು 6000 ಮತಗಳನ್ನು ತೆಗೆದು ಹಾಕಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮತ್ತು ಆಳಂದ ಶಾಸಕರು ದೂರು ನೀಡಿದ್ದರು. ಆಳಂದ ಕ್ಷೇತ್ರದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆ ಆರಂಭಿಸಿ ಚುನಾವಣಾ ಆಯೋಗದಿಂದ ಮಾಹಿತಿ ಕೇಳಿತ್ತು. ಈ ತನಿಖೆಗೆ ಆಯೋಗ ಅಸಹಕಾರ ನೀಡಿದೆ ಎಂದು ಅವರು ತಿಳಿಸಿದ್ದಾರೆ.
























