ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ: ಸುಪ್ರೀಂ ಕೋರ್ಟ್‌ನಲ್ಲೂ ಅರ್ಜಿ ವಜಾ

ನವದೆಹಲಿ: ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದನ್ನು ವಿರೋಧಿಸಿ ಸಲ್ಲಿಕೆ ಮಾಡಲಾಗಿದ್ದ ಅರ್ಜಿಯನ್ನು ವಜಾ ಮಾಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದ್ದ ಅರ್ಜಿ ಸಹ ವಜಾ ಮಾಡಲಾಗಿದೆ.

ಸರ್ಕಾರ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದನ್ನು ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇನ್ನಿತರರು ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆ ಮಾಡಲಾಗಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ವಜಾ ಮಾಡಿ ಆದೇಶ ಹೊರಡಿಸಿದೆ.





















































 
 
error: Content is protected !!
Scroll to Top