ವಿದ್ಯಾರ್ಥಿಗಳು, ಪೋಷಕರು, ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನ
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ 2026ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿ ಪ್ರಕಟಿಸಲಾಗಿದೆ. 2026ರ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆ.20ರಿಂದ ಅಕ್ಟೋಬರ್ 9ರವರೆಗೆ ಕಾಲಾವಕಾಶ ನೀಡಲಾಗಿರುತ್ತದೆ.
ಆಕ್ಷೇಪಣೆಗಳನ್ನು ಮಂಡಳಿಯ ಇ-ಮೇಲ್ ವಿಳಾಸ: chairpersonkseab@gmail.comಗೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗೆ ಕಳುಹಿಸಬೇಕು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ –1ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೊದಲ ಪರೀಕ್ಷೆ 2026ರ ಫೆಬ್ರವರಿ 28ರಂದು ನಡೆಯಲಿದೆ. ಮಾರ್ಚ್ 17ರಂದು ಕೊನೆಯ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ –2ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ, 2026ರ ಏಪ್ರಿಲ್ 25ರಂದು ಪರೀಕ್ಷೆ ಶುರುವಾಗಿ, ಮೇ 9ರಂದು ಕೊನೆಗೊಳ್ಳಲಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ – 1ರ ತಾತ್ಕಾಲಿಕ ವೇಳಾಪಟ್ಟಿಯಂತೆ ಪರೀಕ್ಷೆ 2026ರ ಮಾರ್ಚ್ 18ರಂದು ಆರಂಭವಾಗಿ ಏಪ್ರಿಲ್ 1ರಂದು ಕೊನೆಗೊಳ್ಳಲಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ – 2ರ ತಾತ್ಕಾಲಿಕ ವೇಳಾಪಟ್ಟಿಯಂತೆ ಮೇ 18ರಂದು ಪರೀಕ್ಷೆ ಆರಂಭವಾಗಿ ಮೇ 25 ರಂದು ಕೊನೆಗೊಳ್ಳಲಿದೆ.
























