ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ವಿವಾದಕ್ಕೀಡಾಗಿದ್ದ ಹಿಂದೂ ಜಾತಿಗಳ ಜೊತೆಗಿನ ಕ್ರಿಶ್ಚಿಯನ್‌ ಉಪಜಾತಿ

ಬೆಂಗಳೂರು : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಉಪಜಾತಿ ವರ್ಗದಲ್ಲಿ ‘ಕ್ರಿಶ್ಚಿಯನ್’ ಧರ್ಮದಡಿ ವಿವಿಧ ಜಾತಿಗಳನ್ನು ಉಲ್ಲೇಖದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಈಗ ಅದನ್ನು ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ.

ಕ್ರಿಶ್ಚಿಯನ್‌ ಉಪಜಾತಿ ತೆಗೆದು ಹಾಕಿದ್ದು ನಾನಲ್ಲ, ಬದಲಾಗಿ ಹಿಂದುಳಿದ ವರ್ಗಗಳ ಆಯೋಗ. ಆಯೋಗವು ಶಾಸನಬದ್ಧ ಸಂಸ್ಥೆಯಾಗಿದ್ದು, ಸಮೀಕ್ಷೆ ನಡೆಸಲು ಮಾರ್ಗಸೂಚಿಗಳನ್ನಷ್ಟೇ ಸರ್ಕಾರ ನೀಡಿದೆ. 1,75,000 ಶಿಕ್ಷಕರು ಸಮೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿದ್ದಾರೆ. ಒಬ್ಬ ಶಿಕ್ಷಕರು ತಲಾ 150 ಮನೆಗಳಿಂದ ಮಾಹಿತಿ ಸಂಗ್ರಹಿಸಲಿದ್ದು, ಈ ಸಮೀಕ್ಷಾ ಕಾರ್ಯ 15 ದಿನಗಳ ಕಾಲ ನಡೆಯಲಿದೆ. ಸಮೀಕ್ಷೆಯಲ್ಲಿ ಧರ್ಮ, ಜಾತಿ, ಉಪಜಾತಿ, ಶಿಕ್ಷಣ, ಉದ್ಯೋಗ ಸೇರಿದಂತೆ ಹಲವು ಮಾಹಿತಿಗಳನ್ನು ಕಲೆ ಹಾಕಲಿದ್ದಾರೆ ಎಂದರು.





















































 
 

ಕಾಂಗ್ರೆಸ್ ಜಾತಿಗಳನ್ನು ವಿಭಜಿಸುತ್ತಿದೆ ಎಂಬ ಬಿಜೆಪಿ ಆರೋಪದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾವು ಯಾವಾಗ ಜಾತಿಗಳನ್ನು ಒಡೆದಿದ್ದೇವೆ? ಸರ್ಕಾರ ಜನರ ಸಾಮಾಜಿಕ-ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ತಿಳಿದುಕೊಳ್ಳಬೇಕು. ಅದನ್ನು ತಿಳಿಯದೆ ನಾವು ನಿಮಗಾಗಿ ನೀತಿಗಳನ್ನು ಹೇಗೆ ರೂಪಿಸಬಹುದು? ಎಂದು ಪ್ರಶ್ನಿಸಿದರು.

error: Content is protected !!
Scroll to Top