ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ಆಗಮಿಸಿ ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌

ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕಾರ

ಮೈಸೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಉದ್ಘಾಟಿಸಿದರು. ಈ ಮೂಲಕ ಮಲ್ಲಿಗೆ ಮುಡಿದು ಹಿಂದು ಸಂಪ್ರದಾಯದಂತೆ ದಸರಾ ಉದ್ಘಾಟಿಸುತ್ತೀರಾ ಎಂದು ತನಗೆ ಸವಾಲು ಹಾಕಿದವರಿಗೆ ದಿಟ್ಟ ಉತ್ತರ ನೀಡಿದರು.

ದಸರಾ ಉದ್ಘಾಟನೆಗೆ ಆಗಮಿಸಿದ ಬಾನು ಮುಷ್ತಾಕ್‌ ಆರಂಭದಲ್ಲಿ ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕರಿಸಿದರು. ಸಿಎಂ ಸಿದ್ದರಾಮಯ್ಯ, ಸಚಿವರ ಜೊತೆ ಬಾನು ಮುಷ್ತಾಕ್‌ ದೇವಸ್ಥಾನಕ್ಕೆ ಆಗಮಿಸಿದರು. ಗರ್ಭಗುಡಿ ಮುಂಭಾಗದ ಆವರಣದಲ್ಲಿ ನಿಂತು ತಾಯಿ ಚಾಮುಂಡಿ ದರ್ಶನ ಪಡೆದರು. ನಂತರ ಗಣಪತಿಗೆ ಕೈ ಮುಗಿದು, ಮಂಗಳಾರತಿ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ.





















































 
 

ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್ ಇಡೀ ಕುಟುಂಬವೇ ಆಗಮಿಸಿದೆ. ಖಾಸಗಿ ಹೋಟೆಲಿನಿಂದ ಕಾರಿನಲ್ಲಿ ಚಾಮುಂಡಿ ಬೆಟ್ಟಕ್ಕೆ ಬಾನು ಮುಷ್ತಾಕ್‌ ಆಗಮಿಸಿದರೆ ಸಿಎಂ ಮತ್ತು ಸಚಿವರು ಐರಾವತ ಬಸ್ಸಿನಲ್ಲಿ ಆಗಮಿಸಿದರು.

ಜಾನಪತ ಕಲಾತಂಡಗಳು ಗಣ್ಯರನ್ನು ಸ್ವಾಗತ ಮಾಡಿದವು. ನಂತರ ಜಾನಪದ ಕಲಾ ತಂಡಗಳ ಜೊತೆ ಮಹಿಷಾಸುರ ಪ್ರತಿಮೆಯಿಂದ ಬಾನು ಮುಷ್ತಾಕ್, ಸಿಎಂ ಸಿದ್ದರಾಮಯ್ಯ, ಸಚಿವರು ಚಾಮುಂಡಿ ದೇವಸ್ಥಾನದ ಒಳಗಡೆ ಪ್ರವೇಶಿಸಿ ಪೂಜೆಯಲ್ಲಿ ಭಾಗಿಯಾದರು.

error: Content is protected !!
Scroll to Top