ಬೆಂಕಿ ಅವಘಡ : ಲಕ್ಷಾಂತರ ರೂ. ಬೆಲೆಬಾಳುವ ಬಟ್ಟೆಬರೆ ನಾಶ

ಮಂಗಳೂರು: ನಗರದ ಹಂಪನಕಟ್ಟೆಯ ಟೋಕಿಯೊ ಮಾರ್ಕೆಟ್ ಬಳಿಯ ಬಟ್ಟೆ ಅಂಗಡಿಯೊಂದರಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಬಟ್ಟೆಬರೆಗಳು ಅಗ್ನಿಗೆ ಆಹುತಿಯಾಗಿವೆ.

ಕಟ್ಟಡವೊಂದರ ಮೇಲಿನ ಮಹಡಿಯಲ್ಲಿನ ಬಟ್ಟೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿಯನ್ನು ನಂದಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಕಿ ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ.

error: Content is protected !!
Scroll to Top