ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಾ.25 ರಿಂದ 31 ರ ತನಕ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಮಂಗಳವಾರ ಪುತ್ತೂರು ನಗರದಲ್ಲಿ ವಿತರಿಸಲಾಯಿತು.
ಬೊಳುವಾರು ಆಂಜನೇಯ ಮಂತ್ರಾಲಯದ ಬಳಿ ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿಯವರು ಆಮಂತ್ರಣ ವಿತರಣೆಗೆ ಚಾಲನೆ ನೀಡಿದರು. ಬಳಿಕ ಮುಖ್ಯರಸ್ತೆಯ ಮೂಲಕ ದರ್ಬೆ, ಕೂರ್ನಡ್ಕದ ತನಕ ಆಮಂತ್ರಣ ವಿತರಿಸಿದರು.
ದೇವಸ್ಥಾನದ ಟ್ರಸ್ಟ್‌ನ ಕಾರ್ಯದರ್ಶಿ ಯಂ.ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ, ಸದಸ್ಯರಾದ ಕೆ. ಗಿರೀಶ್ ರೈ ಮಣಿಯ, ಯಂ.ರವಿ ಮಣಿಯ, ಯಂ. ಸುಧೀರ್ ಹೆಬ್ಬಾರ್ ಮಣಿಯ, ಪದ್ಮನಾಭ ಪೂಜಾರಿ ಬೆದ್ರಾಳ, ಗಣೇಶ್ ಭಟ್ ಮಜಲುಮಾರು, ಗಣೇಶ್ ಶೆಟ್ಟಿ ಶಿಬರ, ಪ್ರಸನ್ನ ಭಟ್ ಪಂಚವಟಿ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಉದಯ ತಂತ್ರಿ ಕೆಮ್ಮಿಂಜೆ, ಉಪಾಧ್ಯಕ್ಷೆ ಚಂದ್ರಕಲಾ ಮುಕ್ವೆ, ನರಿಮೊಗರು ಗ್ರಾ.ಪಂ ಉಪಾಧ್ಯಕ್ಷ ಸುಧಾಕರ ಕುಲಾಲ್, ಸದಸ್ಯೆ ಮಲ್ಲಿಕಾ ಲತಾ, ಉಮಾಮಹೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಪ್ರವೀಣ್, ಸತೀಶ್ ಪ್ರಭು ಮಣಿಯ, ಜನಾರ್ದನ ಪುರುಷರಕಟ್ಟೆ, ತಾ.ಪಂ ಮಾಜಿ ಸದಸ್ಯ ಜಯರಾಮ ಪೂಜಾರಿ ನರಿಮೊಗರು, ಸೇರಿದಂತೆ ಬ್ರಹ್ಮಕಲಶೋತ್ಸವ ಸಮಿತಿಯ ವಿವಿಧ ಉಪ ಸಮಿತಿಗಳ ಸಂಚಾಲಕರು, ಸದಸ್ಯರು, ಭಜನಾ ಮಂಡಳಿಯ ಸದಸ್ಯರು ಹಾಗೂ ಭಕ್ತಾದಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.