ಬೆಂಗಳೂರು: ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎನ್ನುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು, ಜವಾಬ್ದಾರಿಯ ಕರೆ ನೀಡಿದ್ದಾರೆ.
ಅರಣ್ಯ ಇಲಾಖೆಯಿಂದ ನಡೆಸಲಾದ ಜಾಥ ಕಾರ್ಯಕ್ರಮವೊಂದನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಅರಣ್ಯವಾಗಿದ್ದ ಪ್ರದೇಶಗಳೆಲ್ಲವೂ ಈಗ ನಾಡಾಗಿ ಪರಿವರ್ತನೆ ಆಗಿವೆ. ಮುಂದಿನ ಪೀಳಿಗೆಗಾಗಿ ನಾವು ಅರಣ್ಯಗಳನ್ನು ಸಂರಕ್ಷಣೆ ಮಾಡಬೇಕು. ಇದು ನಮ್ಮೆಲ್ಲರ ಜವಾಬ್ದಾರಿ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ನಿಸರ್ಗ ಸಂಪತ್ತಿನಲ್ಲಿ ಶ್ರೀಮಂತವಾಗಿದೆ. ನಮ್ಮ ಪೂರ್ವಿಕರು ನಿಸರ್ಗವನ್ನು ದೇವರು ಎಂದು ಪೂಜೆ ಮಾಡುತ್ತಿದ್ದರು. ನಾವು ಆ ಸಂಸ್ಕೃತಿಯನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
























