ಬೆಂಗಳೂರು: ಸಿ ಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತಿದ್ದಾರೆ. ನವೆಂಬರ್‌ನಲ್ಲಿ ಯಾವ ಕ್ರಾಂತಿಯೂ ಇಲ್ಲ. ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಗಾದಿಯಲ್ಲಿ ಕುಳಿತಿರುತ್ತಾರೆ ಎಂದು ಡಿ.ಸಿ.ಎಂ. ಡಿ.ಕೆ. ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಮಂಡ್ಯದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ತಾವೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದಾಗಿ ಹೇಳಿದ್ದಾರೆ. ಪಕ್ಷಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಆಯಾಯ ನಾಯಕರ ಬೆಂಬಲಿಗರಿಗೆ ನಮ್ಮ ನಾಯಕನೇ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇರುತ್ತದೆ. ಈ ಬಗ್ಗೆ ಮಾತನಾಡಬಾರದು ಎಂದು ನಮ್ಮ ಅಧ್ಯಕ್ಷರೇ ನಮಗೆಲ್ಲ ಸೂಚನೆ ನೀಡಿದ್ದಾರೆ. ಮಾತನಾಡಿದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ನಮಗೆ ಪಕ್ಷ ಮುಖ್ಯ ಎಂದು ನುಡಿದಿದ್ದಾರೆ.
























