ಮಹಿಳಾ ವಿಶ್ವಕಪ್‌ನಲ್ಲೂ ಪಾಕಿಸ್ತಾನ ಜೊತೆ ನೋ ಹ್ಯಾಂಡ್‌ ಶೇಕ್‌

ಇಂದಿನ ಮುಖಾಮುಖಿಯಲ್ಲಿ ಹ್ಯಾಂಡ್‌ಶೇಕ್‌ ಮಾಡದಂತೆ ಬಿಸಿಸಿಐ ಸೂಚನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವಿನ ನೋ ಹ್ಯಾಂಡ್‌ಶೇಕ್‌ ನಿಲುವು ಪ್ರಸ್ತುತ ನಡೆಯುತ್ತಿರುವ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ ಕೂಟಕ್ಕೂ ಮುಂದುವರಿದಿದೆ. ಭಾರತದ ಮಹಿಳಾ ತಂಡ 2025ರ ವಿಶ್ವಕಪ್‌ನಲ್ಲಿ ಈಗಾಗಲೇ ಸೆಪ್ಟೆಂಬರ್ 30 ರಂದು ನಡೆದಿದ್ದ ಶ್ರೀಲಂಕಾ ವಿರುದ್ಧ ಗೆಲುವಿನ ಆರಂಭ ಪಡೆದಿದೆ. ಇಂದು ಪಾಕಿಸ್ತಾನದ ವಿರುದ್ಧ ಎರಡನೇ ಪಂದ್ಯವಾಡಲಿದೆ. ಈ ಪಂದ್ಯಕ್ಕೂ ಮುನ್ನ ಬಿಸಿಸಿಐ ಭಾರತೀಯ ಆಟಗಾರ್ತಿಯರು ಪಾಕಿಸ್ತಾನಿ ಆಟಗಾರ್ತಿಯರೊಂದಿಗೆ ಕೈಕುಲುಕದಂತೆ ಸ್ಪಷ್ಟ ಆದೇಶ ನೀಡಿದೆ. ಪುರುಷರ ಏಷ್ಯಾಕಪ್‌ನಲ್ಲೂ ಇದೇ ನೀತಿ ಅನುಸರಿಸಲಾಗಿತ್ತು.

ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ಮಹಿಳಾ ತಂಡ ಟೀಂ ಇಂಡಿಯಾ ಟೂರ್ನಿಯಲ್ಲಿ ತನ್ನ ಎರಡನೇ ಪಂದ್ಯವನ್ನು ಭಾನುವಾರ ಪಾಕಿಸ್ತಾನ ವಿರುದ್ಧ ಆಡಲಿದೆ. ಪಾಕಿಸ್ತಾನ ತಂಡ ಭಾರತಕ್ಕೆ ಬಾರದ ಕಾರಣ ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಶ್ರೀಲಂಕಾಕ್ಕೆ ಹಾರಿದೆ. ಇದೀಗ ಉಭಯ ತಂಡಗಳು ಹೈವೋಲ್ಟೇಜ್ ಕಾಳಗದಲ್ಲಿ ಪರಸ್ಪರ ಕಾದಾಡಲು ಸಜ್ಜಾಗಿವೆ. ಆದರೆ ಈ ಪಂದ್ಯಕ್ಕೂ ಮುನ್ನ ಭಾರತ ಮಹಿಳಾ ತಂಡಕ್ಕೆ ಬಿಸಿಸಿಐ ಸ್ಪಷ್ಟ ನಿರ್ದೇಶನ ನೀಡಿದ್ದು, ಈ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಆಟಗಾರ್ತಿಯರೊಂದಿಗೆ ಕೈಕುಲುಕದಂತೆ ಆದೇಶ ನೀಡಿದೆ ಎಂದು ವರದಿಯಾಗಿದೆ.





















































 
 

ಕೆಲವೇ ದಿನಗಳ ಹಿಂದೆ ಪುರುಷರ ಟಿ20 ಏಷ್ಯಾಕಪ್ ಟೂರ್ನಮೆಂಟ್ ಮುಕ್ತಾಯಗೊಂಡಿದ್ದು, ಈ ಟೂರ್ನಮೆಂಟ್‌ನಲ್ಲಿ ಟೀಂ ಇಂಡಿಯಾ ಮತ್ತು ಪಾಕಿಸ್ತಾನ ತಂಡಗಳು 3 ಬಾರಿ ಮುಖಾಮುಖಿಯಾಗಿದ್ದವು. ಆದರೆ ಟೀಂ ಇಂಡಿಯಾ ಈ ಮೂರು ಬಾರಿಯೂ ಪಾಕಿಸ್ತಾನ ಆಟಗಾರರೊಂದಿಗೆ ಶೇಕ್​ಹ್ಯಾಂಡ್ ಮಾಡಿರಲಿಲ್ಲ. ಈಗ ಮಹಿಳಾ ತಂಡಕ್ಕೂ ಅದೇ ರೀತಿ ನಡೆದುಕೊಳ್ಳುವಂತೆ ಬಿಸಿಸಿಐ ತಿಳಿಸಿದೆ ಎಂದು ವರದಿಯಾಗಿದೆ.

ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಬಿಸಿಸಿಐ ಮೂಲಗಳ ಪ್ರಕಾರ ಕೊಲಂಬೊಗೆ ತೆರಳುವ ಮೊದಲು ಪಾಕಿಸ್ತಾನದ ಆಟಗಾರ್ತಿಯರೊಂದಿಗೆ ಕೈಕುಲುಕದಂತೆ ಹರ್ಮನ್‌ಪ್ರೀತ್ ಕೌರ್ ಪಡೆಗೆ ಸೂಚನೆ ನೀಡಲಾಗಿದೆ. ಟಾಸ್ ಸಮಯದಲ್ಲಿ ಮತ್ತು ಪಂದ್ಯದ ನಂತರ ಆಟಗಾರ್ತಿಯರೊಂದಿಗೆ ಹಸ್ತಲಾಘವ ಮಾಡಬಾರದು ಎಂದು ಹೇಳಲಾಗಿದೆ.

ಭಾರತದ ಎದುರು ಗೆದ್ದಿಲ್ಲ ಪಾಕಿಸ್ತಾನ

ಉಭಯ ತಂಡಗಳ ನಡುವಿನ ಮುಖಾಮುಖಿ ದಾಖಲೆಯನ್ನು ನೋಡುವುದಾದರೆ ಕಳೆದ 20 ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡಗಳು 11 ಬಾರಿ ಏಕದಿನ ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗಿದ್ದು ಪ್ರತಿ ಬಾರಿಯೂ ಭಾರತ ಗೆಲುವು ಸಾಧಿಸಿದೆ. ಅಂದರೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಏಕದಿನ ಪಂದ್ಯಗಳಲ್ಲಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ಇದು 12 ನೇ ಬಾರಿಯಾಗಿದೆ. ಇದುವರೆಗಿನ ಭಾರತೀಯ ಮಹಿಳಾ ತಂಡದ ದಾಖಲೆಯನ್ನು ಗಮನಿಸಿದರೆ ಬರುವ ಭಾನುವಾರ ಕೂಡ ಪಾಕಿಸ್ತಾನ ವಿರುದ್ಧ 12-0 ಅಂತರದ ಗೆಲುವು ಸಾಧಿಸುವುದು ಖಚಿತವಾಗಿದೆ.

error: Content is protected !!
Scroll to Top