ಅಬ್ದುಲ್‌ ರಹಿಮಾನ್‌ ಕೊಲೆ ಆರೋಪಿಗಳ ವಿರುದ್ಧ ಕೋಕಾ ಅನ್ವಯ

ಸೆರೆಯಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ವಿರುದ್ಧ ಕೋಕಾ ಕೇಸ್‌

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಎಂಬಲ್ಲಿ ಕಳೆದ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ (ಕೋಕಾ) ಅಡಿ ಕೇಸ್‌ ದಾಖಲಿಸಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಡಾ.ಅರುಣ್‌ ಕೆ. ತಿಳಿಸಿದ್ದಾರೆ.

ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ.ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್, ಶಿವಪ್ರಸಾದ್ ತುಂಬೆ, ಪ್ರದೀಪ ಶಾಹಿತ್ ಅಲಿಯಾಸ್‌ ಸಾಹಿತ್, ಸಚಿನ್ ಅಲಿಯಾಸ್‌ ಸಚ್ಚು ರೊಟ್ಟಿಗುಡ್ಡೆ, ರಂಜಿತ್ ಎಂಬವರ ವಿರುದ್ಧ ಕೋಕಾ ಅನ್ವಯಿಸಲಾಗಿದೆ.





















































 
 

ಹಿಂದೂಪರ ಸಂಘಟನೆ ಮುಖಂಡ ಭರತ್ ಕುಮ್ಡೇಲು ವಿರುದ್ಧವೂ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಂಧನ ಭೀತಿ ಹಿನ್ನೆಲೆ ಭರತ್‌ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಕೋಕಾ ಅನ್ವಯಿಸಲ್ಪಟ್ಟ ಉಳಿದ ಆರೋಪಿಗಳು ಪ್ರಸ್ತುತ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೆರೆಯಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು, ಕಾನೂನುಬಾಹಿರ ಚಟುವಟಿಕೆ, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾದವರ ವಿರುದ್ಧ ಕರಾಳ ಕೋಕಾ ಅನ್ವಯಿಸಲಾಗುತ್ತದೆ.

error: Content is protected !!
Scroll to Top