50 ಸಾವಿರ ರೂ. ಲಂಚ ಸ್ವೀಕಾರ : ಇಂಧನ ಸಚಿವ ಜಾರ್ಜ್‌ ಸಹಾಯಕ ಲೋಕಾಯುಕ್ತ ಬಲೆಗೆ

ನಿರಾಕ್ಷೇಪಣಾ ಪ್ರಮಾಣಪತ್ರ ನೀಡಲು ಲಂಚ ಸ್ವೀಕರಿಸಿದ್ದ ಒಎಸ್‌ಡಿ

ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒಎಸ್‌ಡಿ) ಶನಿವಾರ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇಂಧನ ಸಚಿವರ ಒಎಸ್‌ಡಿ ಜ್ಯೋತಿ ಪ್ರಕಾಶ್(50), ಅವರ ಕಾರು ಚಾಲಕ ನವೀನ್ ಎಂ(34) ಅವರನ್ನು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.





















































 
 

ಬ್ಯಾಡರಹಳ್ಳಿ ನಿವಾಸಿ ಅನಂತರಾಜು ಕೆ.ಎಂ(37) ಎಂಬವರು ನೀಡಿದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸ್ ಇಂಧನ ಸಚಿವರ ಒಎಸ್‌ಡಿ ವಿರುದ್ಧ ಕೇಸ್ ದಾಖಲಿಸಿದ್ದು, ವಿದ್ಯುತ್ ಮಂಜೂರಾತಿಗಾಗಿ ಡಿಆರ್ ಡೆವಲಪರ್‌ಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.

ಆರಂಭದಲ್ಲಿ ಒಂದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ನಂತರ ಆರೋಪಿಗಳು 50,000 ರೂಪಾಯಿಗೆ ಒಪ್ಪಿಕೊಂಡರು. ಅದರಂತೆ ಹಣ ಸ್ವೀಕರಿಸುವ ಸಮಯದಲ್ಲಿ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

error: Content is protected !!
Scroll to Top