ನೆರಿಯ : ಬೆಂಕಿ ಅವಘಡದಲ್ಲಿ ಮನೆ ಸುಟ್ಟು ಕರಕಲು

ಬೆಳ್ತಂಗಡಿ: ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ಸೋಮವಾರ ರಾತ್ರಿ ಹರೀಶ್ ಎಂಬವರ ಮನೆ ಬೆಂಕಿಗಾಹುತಿಯಾಗಿ ಅಪಾರ ನಷ್ಟ ಸಂಭವಿಸಿದೆ. ಘಟನೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ.

ಹರೀಶ್ ಅವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ ಪಕ್ಕದ ಮನೆಗೆ ಹೋಗಿದ್ದರು. ರಾತ್ರಿ ಆಗುತ್ತಿದ್ದಂತೆಯೇ ಮನೆಗೆ ಬೆಂಕಿ ಹತ್ತಿಕೊಂಡಿದೆ.
ಮನೆಗೆ ಬೆಂಕಿ ಹೇಗೆ ತಗುಲಿದೆ ಎಂಬುದು ಇನ್ನಷ್ಟೆ ತಿಳಿದು ಬರಬೇಕಾಗಿದೆ. ಹಂಚಿನ ಮೇಲ್ಛಾವಣಿಯ ಮನೆ ಬಹುತೇಕ ಬೆಂಕಿಗೆ ಆಹುತಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

error: Content is protected !!
Scroll to Top