ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ರಜೆ: ಸಿಎಂ ‌ಸಿದ್ದರಾಮಯ್ಯ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅ. 18 ರ ವರೆಗೆ ದಸರಾ ರಜೆ ವಿಸ್ತರಣೆ ಮಾಡಿ ಸಿ ಎಂ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗಳು ನಡೆಯುತ್ತಿದ್ದು, ನಿಗದಿ ಮಾಡಿದ ಸಮಯಕ್ಕೆ ಸಮೀಕ್ಷೆ ಮುಗಿಯದ ಹಿನ್ನೆಲೆಯಲ್ಲಿ ಅ. 8 ರಿಂದ ಅ. 18 ರ ವರೆಗೆ ರಜೆಯನ್ನು ನೀಡುವಂತೆ ಆದೇಶ ಹೊರಡಿಸಲಾಗಿದೆ.

ಸಿಎಂ ‌ಸಿದ್ದರಾಮಯ್ಯ ನೇತೃತ್ವದಲ್ಲಿ ಶಿಕ್ಷಣ ಸಚಿವರು ಸಭೆ ನಡೆಸಿದ್ದು, ಅದರಲ್ಲಿ ಈ ನಿರ್ಣಯಕ್ಕೆ ಬರಲಾಗಿದೆ. ಹಾಗೆಯೇ ಉಳಿದ ಎಲ್ಲಾ ಸಮೀಕ್ಷೆಗಳನ್ನು ಅ. 18 ರೊಳಗಾಗಿ ಮುಗಿಸುವಂತೆ ಸೂಚನೆ ನೀಡಲಾಗಿದೆ.





















































 
 
error: Content is protected !!
Scroll to Top