ಬೆಂಗಳೂರು: ನಮ್ಮ ಮೆಟ್ರೋಗೆ ವಾಲ್ಮೀಕಿ ಮಹರ್ಷಿಗಳ ಹೆಸರನ್ನು ಇರಿಸುವಂತೆ ಸಿ ಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ನಮ್ಮ ಮೆಟ್ರೋವನ್ನು ನಡೆಸುತ್ತಿವೆ. ಈ ಕಾರಣದಿಂದ ರಾಜ್ಯ ಸರ್ಕಾರದಿಂದ ಬೆಂಗಳೂರಿನ ನಮ್ಮ ಮೆಟ್ರೋಗೆ ವಾಲ್ಮೀಕಿ ಹೆಸರಿಡಲು ಸಾಧ್ಯವಿಲ್ಲ. ಹೀಗಾಗಿ ನಾನು ಕೇಂದ್ರ ಸರ್ಕಾರದ ಬಳಿ ಶಿಫಾರಸ್ಸು ಮಾಡಿದ್ದೇನೆ. ಕೇಂದ್ರ ಒಪ್ಪಿಕೊಳ್ಳಬೇಕು. ಮುಂದೇನಾಗುತ್ತದೆ ಎಂಬುದನ್ನು ನಿರೀಕ್ಷಿಸೋಣ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ವಿ. ಎಸ್. ಉಗ್ರಪ್ಪ ಅವರು ಪಠ್ಯದಲ್ಲಿ ವಾಲ್ಮೀಕಿ ಮತ್ತು ರಾಮಾಯಣ ವಿಷಯಗಳನ್ನು ಸೇರ್ಪಡೆ ಮಾಡುವ ಸಲಹೆಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಅವರು ನುಡಿದಿದ್ದಾರೆ.
























