ಸ್ನೇಹಿತರಿಂದ ವಿಡಿಯೋ ಬಹಿರಂಗ ಮಾಡುವ ಬೆದರಿಕೆ : ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ

ಗೆಳತಿ ಜೊತೆಗಿದ್ದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಸ್ನೇಹಿತರು

ಕಾರ್ಕಳ : ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್‌ನಲ್ಲಿ ನಡೆದಿದೆ.

ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಭಿಷೇಕ್ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದರು. ಇಬ್ಬರ ಸಂಬಂಧ ಬಹಳ ಮುಂದುವರಿದಿತ್ತು, ಒಟ್ಟಿಗೆ ಇದ್ದ ಖಾಸಗಿ ಕ್ಷಣಗಳನ್ನು ವೀಡಿಯೊ ಮಾಡಿಟ್ಟುಕೊಂಡಿದ್ದರು.





















































 
 

ಅಭಿಷೇಕ್ ಸ್ನೇಹಿತರು ಈ ಸಂಬಂಧದ ಬಗ್ಗೆ ತಿಳಿದುಕೊಂಡು ಖಾಸಗಿ ವೀಡಿಯೊವನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ನಿರಂತರ ಮಾನಸಿಕ ಕಿರುಕುಳ ಮತ್ತು ಅವಮಾನದಿಂದ ನೊಂದ ಅಭಿಷೇಕ್ ಬೆಳ್ಮಣ್‌ನ ಲಾಡ್ಜ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ ನಾಲ್ವರು ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸಿ ಡೆತ್‌ನೋಟ್ ಬರೆದಿಟ್ಟಿದ್ದಾನೆ.

ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಡೆತ್‌ನೋಟ್ ಮತ್ತು ಆತನ ಮೊಬೈಲ್ ಫೋನ್ ವಶಪಡಿಸಿಕೊಂಡು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಭಿಷೇಕ್ ಅವರ ಮೊಬೈಲ್ ಫೋನ್‌ನಿಂದ ಡೇಟಾವನ್ನು ಪಡೆದ ನಂತರವೇ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

error: Content is protected !!
Scroll to Top