ರಾಜ್ಯದ ಸಮಸ್ಯೆಗಳ ನಡುವೆಯೂ ಸಿಎಂ ಔತಣಕೂಟ: ಸಿ.ಟಿ. ರವಿ ವ್ಯಂಗ್ಯ

ಬೆಂಗಳೂರು: ರಾಜ್ಯದಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ, ಭ್ರಷ್ಟಾಚಾರ ಮೊದಲಾದ ಸಮಸ್ಯೆಗಳು ತಾಂಡವವಾಡುತ್ತಿವೆ. ಇವುಗಳ ನಡುವೆ ನೀವು ಔತಣಕೂಟದ ಸಂಭ್ರಮ ಮಾಡುತ್ತಿದ್ದೀರಾ ಎಂದು ಸಿಎಂ ‌ಸಿದ್ದರಾಮಯ್ಯ ಅವರ ಡಿನ್ನರ್ ಮೀಟಿಂಗ್ ಕುರಿತು ಎಂ ಎಲ್ ಸಿ ಸಿ.ಟಿ. ರವಿ ಪ್ರಶ್ನೆ ಮಾಡಿದ್ದಾರೆ.

ಭ್ರಷ್ಟಾಚಾರ 80% ದಾಟಿದೆ ಎಂದು ಗುತ್ತಿಗೆದಾರರೇ ಪತ್ರ ಬರೆಯುತ್ತಾರೆ. ರೈತರ ಆತ್ಮಹತ್ಯೆ ವಿಚಾರದಲ್ಲಿ ದೇಶದಲ್ಲೇ ಕರ್ನಾಟಕ ನಂ.2. ಅತಿವೃಷ್ಟಿಯಿಂದ ಹತ್ತಕ್ಕೂ ಅಧಿಕ ಜಿಲ್ಲೆಗಳು ಹಾನಿಗೊಳಗಾಗಿವೆ. ಹೀಗಿದ್ದರೂ ಸಿ ಎಂ ಔತಣ ಕೂಟ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.





















































error: Content is protected !!
Scroll to Top