ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಬಂಟ್ವಾಳ ಇದರ ಪುತ್ತೂರು ಘಟಕದ ಸಭೆಯು ಪುತ್ತೂರಿನ ಸ್ವಾಗತ ಹೋಟೆಲ್ ನಲ್ಲಿ ಜರಗಿತು .
ಪಡುಮಲೆ ಶ್ರೀ ಕೂವೆ ಶಾಸ್ತರ ದೇವಸ್ಥಾನದಲ್ಲಿ ಇತ್ತೀಚೆಗೆ ಜರಗಿದ ಜಿಲ್ಲಾಮಟ್ಟದ ಹಿರಿಯರ ಕಾರ್ಯಾಗಾರದ ಫಲಶ್ರುತಿ ಬಗ್ಗೆ ಚರ್ಚಿಸಲಾಯಿತು. ಮೂರು ವಿಚಾರಗೋಷ್ಠಿಗಳು, ಹಿರಿಯರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸಿದ ಪುತ್ತೂರು ಘಟಕದ ಅಧ್ಯಕ್ಷರಾದ ಚಂದ್ರಶೇಖರ ಆಳ್ವ ಪಡುಮಲೆ ಇವರನ್ನು ಅಭಿನಂದಿಸಲಾಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದಿನಾಂಕ 18.10.2025 ರಂದು ಜರಗಲಿರುವ ಶುದ್ದ ಎಳ್ಳೆಣ್ಣೆ ಅಭಿಷೇಕಕ್ಕೆ ಪುತ್ತೂರು ಘಟಕದ ವತಿಯಿಂದ ಐದು ಲೀಟರ್ ಶುದ್ಧ ಎಳ್ಳೆಣ್ಣೆಯನ್ನು ದೇವಳಕ್ಕೆ ಸಲ್ಲಿಸುವುದೆಂದು ತೀರ್ಮಾನಿಸಲಾಯಿತು.
ಕೇಂದ್ರ ಸಮಿತಿಯ ಸಂಚಾಲಕರಾದ ಭಾಸ್ಕರ ಬಾರ್ಯ, ಈಶ್ವರ ಭಟ್ ಗುಂಡ್ಯಡ್ಕ, ಭವಾನಿ ಶಂಕರ ಶೆಟ್ಟಿ, ಪುತ್ತೂರು,ಉದಯಶಂಕರ ರೈ ಪುಣಚ ಮೊದಲಾದವರು ಉಪಸ್ಥಿತರಿದ್ದರು.
























