ಧಾರವಾಡ: ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಅರವಿಂದ ಬೆಲ್ಲದ್ ನೇತೃತ್ವದ ಬಿಜೆಪಿ ಕಾರ್ಯಕರ್ತರು ಮುಲ್ಲಾ ಮೋಕ್ಷ್ ಹೋಮ ಎಂಬ ಬೋರ್ಡ್ ಹಿಡಿದು ಅರ್ಚಕರಿಂದ ಹೋಮ ನಡೆಸಿ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಖುರಾನ್ ಪಠಣ ಮಾಡಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರದ ನಡೆಯನ್ನು ಖಂಡಿಸಿ ಈ ಪ್ರತಿಭಟನೆಯನ್ನು ನಡೆಸಲಾಗಿದೆ.
ಸರ್ಕಾರದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರ ಚಿತ್ರ ಹಾಕಿಕೊಂಡು ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಹಾಗೆಯೇ ಒಂದು ಸಮುದಾಯವನ್ನು ಓಲೈಸಲು ಖುರಾನ್ ಪಠಣ ಮಾಡಲಾಗಿದೆ. ಸರ್ಕಾರಿ ಅಧಿಕಾರಿಗಳು ಕಾಂಗ್ರೆಸ್ ಕಾರ್ಯಕರ್ತರಂತೆ ವರ್ತಿಸಿದ್ದಾರೆ. ಇವರೆಲ್ಲರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ.
ಪ್ರತಿಭಟನೆಯ ವೇಳೆ ಬಿಜೆಪಿ ಕಾರ್ಯಕರ್ತರು ‘ಸನಾತನ ಧರ್ಮಕ್ಕೆ ಜಯವಾಗಲಿ’ ಎಂದು ಘೋಷಣೆ ಕೂಗಿದ್ದು ಮಾತ್ರವಲ್ಲದೆ ಸರ್ಕಾರಿ ಕಚೇರಿಯ ಶುದ್ಧೀಕರಣದ ದೃಷ್ಟಿಯಿಂದ ರುದ್ರ ಪಾರಾಯಣ ಮಾಡುವ ಮೂಲಕ ಅರ್ಚಕರಿಂದ ಹೋಮ ಕಾರ್ಯಕ್ರಮ ನಡೆಸಿದ್ದಾರೆ.
























