ನಕಲಿ ಒಡವೆ ಅಡವಿಟ್ಟು ಬ್ಯಾಂಕಿಗೆ ವಂಚನೆ : ಪುತ್ತೂರಿನ ಓರ್ವನ ಸಹಿತ ಮೂವರ ಸೆರೆ

ಆರೋಪಿಗಳಿಂದ ಕಾರು ಸಹಿತ 26.5 ಲ.ರೂ. ಸೊತ್ತು ವಶ

ಮಂಗಳೂರು: ನಗರದ ಕಾವೂರಿನ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 6.24 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಕಾಶಭವನದ ಆನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಪುತ್ತೂರು ತಾಲೂಕು ಬೆಳಂದೂರು ಗ್ರಾಮದ ನಿವಾಸಿ ಅಬ್ದುಲ್ ರಮೀಝ್ (33) ಎಂದು ಗುರುತಿಸಲಾಗಿದೆ.

ಅಕ್ಟೋಬರ್ 9ರಂದು ಹಾರೀಫ್ ಅಬೂಬಕ್ಕರ್ ಕಾವೂರು ಬಳಿಯ ಸಹಕಾರ ಸಂಘದಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು 6.24 ಲಕ್ಷ ರೂ. ಸಾಲ ಪಡೆದಿದ್ದ. ಆದರೆ ನಂತರ ಅಡವಿಟ್ಟ ಚಿನ್ನಾಭರಣದ ಬಗ್ಗೆ ಅನುಮಾನ ಬಂದ ಹಿನ್ನೆಲೆ ಅವುಗಳನ್ನು ಪರಿಶೀಲಿಸಿದಾಗ ನಕಲಿ ಎಂದು ದೃಢಪಟ್ಟಿದೆ. ಈ ಬಗ್ಗೆ ಸಹಕಾರಿ ಸಂಘ ನೀಡಿದ ದೂರಿನ ಆಧಾರದ ಮೇಲೆ ಕಾವೂರು ಪೊಲೀಸರು ತನಿಖೆ ಕೈಗೊಂಡು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.





















































 
 

ಆರೋಪಿಗಳಿಂದ 5 ಲಕ್ಷ ರೂ. ನಗದು, ಸುಮಾರು 45 ಗ್ರಾಂ ತೂಕದ ನಕಲಿ ಚಿನ್ನಾಭರಣಗಳು, ಅಂದಾಜು 20 ಲಕ್ಷ ರೂ. ಮೌಲ್ಯದ ಒಂದು ಕಾರು ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಮೌಲ್ಯ ಸುಮಾರು 26.5 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

error: Content is protected !!
Scroll to Top