ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತ ದಾಳಿ

ಪ್ರಾಣಿಗಳ ಆಹಾರ ಪೂರೈಕೆ ಸಹಿತ ವಿವಿಧ ವ್ಯವಹಾರಗಳಲ್ಲಿ ಲೋಪದೋಷದ ಆರೋಪ

ಮಂಗಳೂರು : ನಗರದ ಹೊರವಲಯದ ಪಿಲಿಕುಳ ನಿಸರ್ಗಧಾಮ ಕಚೇರಿಗೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ನಡೆಸಿದ್ಡಾರೆ.

ಡಿವೈಎಸ್‌ಪಿ ಡಾ.ಗಾನ ಪಿ ಕುಮಾರ್ ನೇತೃತ್ವದ ತಂಡ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಿದೆ. ಅನುದಾನ ದುರುಪಯೋಗ, ಆದಾಯ ಮತ್ತು ವೆಚ್ಚದ ಬಗ್ಗೆ ಪರಿಶೀಲನೆ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ, ಮೃಗಾಲಯದ ಪ್ರಾಣಿಗಳ ಆಹಾರ ಸರಬರಾಜಿನಲ್ಲಿ ಅವ್ಯವಹಾರ, ಮೃಗಾಲಯದ ನಿರ್ವಹಣೆಯಲ್ಲಿ ಭಾರಿ ಲೋಪದೋಷಗಳ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಈ ಹಿಂದೆ ಮೇ 23ರಂದು ಸಹ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.





















































 
 
error: Content is protected !!
Scroll to Top