ನವದೆಹಲಿ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರ ಚೆನ್ನೈ ನಿವಾಸಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಒಡ್ಡಿದ್ದಾರೆ.
ಅಪರಿಚಿತ ವ್ಯಕ್ತಿಯೊಬ್ಬ ಮನೆಯೊಳಗೆ ಬಾಂಬ್ ಇರಿಸಲಾಗಿದೆ ಎಂದು ಕರೆ ಮಾಡಿ ತಿಳಿಸಿದ್ದು, ಇದರಿಂದ ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ಈ ವಿಷಯ ತಿಳಿಯುತ್ತಿದ್ದ ಹಾಗೆಯೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ, ಶ್ವಾನ ದಳ ಆಗಮಿಸಿ ಪರಿಶೀಲನೆ ನಡೆಸಿದೆ. ಈ ಸಂದರ್ಭದಲ್ಲಿ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.
























