ಮಡಿಕೇರಿ: ಇಂದು ಮಧ್ಯಾಹ್ನ 1.44 ರ ಶುಭ ಮುಹೂರ್ತದಲ್ಲಿ ಕಾವೇರಿ ನದಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ನಡೆಯಿತು.
ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಕಾವೇರಿ ತೀರ್ಥ ಸ್ವರೂಪಿಣಿಯಾಗಿ ಕಾಣಿಸಿಕೊಂಡು ಭಕ್ತರನ್ನು ಅನುಗ್ರಹಿಸಿದಳು.
ಈ ಪುಣ್ಯ ಕಾರ್ಯಕ್ಕೆ ಸಂಸದ ಯದುವೀರ ಕೃಷ್ಣದತ್ತ ಒಡೆಯರ್, ಸಿ ಎಂ ಕಾನೂನು ಸಲಹೆಗಾರ ಮತ್ತು ಶಾಸಕ ಎ. ಎಸ್. ಪೊನ್ನಣ್ಣ ಸೇರಿದಂತೆ ಇನ್ನೂ ಹಲವು ಗಣ್ಯರು ಸಾಕ್ಷಿಗಳಾದರು.
























