ಪ್ರಿಯಾಂಕ್ ಖರ್ಗೆ‌ಗೆ ಬೆದರಿಕೆ ಒಡ್ಡಿದ ವ್ಯಕ್ತಿ ಅರೆಸ್ಟ್: ಜಿ. ಪರಮೇಶ್ವರ್

ತುಮಕೂರು: RSS ನಿಷೇಧಕ್ಕೆ ಮನವಿ ಮಾಡಿ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಒಡ್ಡಿದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದ್ದು, ಖರ್ಗೆ‌ಗೆ ಭದ್ರತೆ ನೀಡಲಾಗಿದೆ ಎಂದು ಗೃಹ ಸಚಿವ ಡಾ‌. ಜಿ. ಪರಮೇಶ್ವರ್ ಹೇಳಿದ್ದಾರೆ.

ಖರ್ಗೆ ಗೆ ಬೆದರಿಕೆ ಒಡ್ಡಿದ ಪ್ರಕರಣದ ಹಿಂದೆ ಯಾರಾದರೂ ಇದ್ದಾರೆಯೇ? ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಖಾಸಗಿಯವರು ಸರ್ಕಾರಿ ಅಥವಾ ಖಾಸಗಿ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸಬೇಕಾದರೆ ಅನುಮತಿ ಕಡ್ಡಾಯ. ಹಿಂದೆ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಖಾಸಗಿಯವರು ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯುವಂತೆ ಆದೇಶಿಸಿದ್ದರು ಎಂದಿದ್ದಾರೆ‌.

RSS ಸೇರಿ ಬೇರೆ ಬೇರೆ ಖಾಸಗಿ ಸಂಘಟನೆಯವರು ಶಾಲೆ, ಕಾಲೇಜು, ಧಾರ್ಮಿಕ ಸಂಸ್ಥೆಗಳಲ್ಲಿ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ನಿನ್ನೆಯ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪಥ ಸಂಚಲನಕ್ಕೆ ಪೊಲೀಸ್ ಅನುಮತಿ ಕಡ್ಡಾಯ. ಕಾನೂನು ಕ್ರಮಗಳನ್ನು ಪಾಲಿಸಿ ಪಥಸಂಚಲನ ನಡೆಸಬೇಕು ಎಂದರು.





















































 
 
error: Content is protected !!
Scroll to Top